ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರೆ ನೀಡಲಾಗಿದ್ದ ಮುಷ್ಕರವನ್ನು ಹೈಕೋರ್ಟ್ ಆದೇಶಕ್ಕೆ ಮನ್ನಣೆ ನೀಡಿ ಹಿಂಪಡೆಯಲಾಗಿದೆ’ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಹೈಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಿದೆ.

‘ಮುಷ್ಕರದಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ’ ಎಂದು ಆರೋಪಿಸಿ ನಗರದ ಜೆ.ಸುನಿಲ್ ಸೇರಿದಂತೆ ಐವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಪ್ರತಿವಾದಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪರ ಹಿರಿಯ ವಕೀಲ ಕೆ.ಬಿ.ನಾರಾಯಣ ಸ್ವಾಮಿ, ಹೈಕೋರ್ಟ್ ಆದೇಶಕ್ಕೆ ತಲೆಬಾಗಿ ಮುಷ್ಕರ ಹಿಂಪಡೆದಿರುವ ಬಗ್ಗೆ ನ್ಯಾಯಪೀಠಕ್ಕೆ ಮೆಮೊ ಸಲ್ಲಿಸಿದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ‘ಇದರಿಂದಾಗಿ ಅರ್ಜಿದಾರರ ಉದ್ದೇಶ ಈಡೇರಿದೆ. ಹಾಗಾಗಿ, ವಿಚಾರಣೆ ಮುಂದುವರಿಸುವುದು ವ್ಯರ್ಥ. ಆದಾಗ್ಯೂ, ಸಂಧಾನ ಮುಂದುವರಿಸಿ’ ಎಂದು ನಾರಾಯಣ ಸ್ವಾಮಿ ಅವರಿಗೆ ನಿರ್ದೇಶಿಸಿ ಅರ್ಜಿ ವಿಲೇವಾರಿ ಮಾಡಿತು. ಅರ್ಜಿದಾರರ ಪರ ವಕೀಲೆ ದೀಕ್ಷಾ ಅಮೃತೇಶ್ ಹಾಜರಿದ್ದರು.

Cut-off box - ಹಾಜರಾತಿ ಮಾನದಂಡ: ಅರ್ಜಿ ವಿಚಾರಣೆಗೆ ನಕಾರ ‘ಪರೀಕ್ಷೆಗೆ ಹಾಜರಾಗಲು ಅರ್ಹತೆ ಪಡೆದುಕೊಳ್ಳುವುದಕ್ಕೆ ವಿಶ್ವವಿದ್ಯಾಲಯಗಳು ನಿಗದಿಪಡಿಸುವ ಹಾಜರಾತಿ ಮಿತಿಯ ಮಾನದಂಡದ ಪುನರಾವಲೋಕನಕ್ಕೆ ಉನ್ನತ ಮಟ್ಟದ ಸಮಿತಿ ರಚಿಸಲು ನಿರ್ದೇಶಿಸಬೇಕು’ ಎಂದು ಕೋರಲಾಗಿದ್ದ ಅರ್ಜಿಯ ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ. ಈ ಸಂಬಂಧ ಬೆಂಗಳೂರಿನ ಭರತ್ ರಾಜ್ ರೆಡ್ಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ ‘ಶೈಕ್ಷಣಿಕ ನೀತಿ ರೂಪಿಸುವ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡುವುದಿಲ್ಲ. ಮುಖ್ಯವಾಗಿ ಈ ರೀತಿಯ ಸಾಮಾನ್ಯ ಆಕ್ಷೇಪಗಳ ಅರ್ಜಿಗಳನ್ನು ಪರಿಗಣಿಸಲು ಸಾಧ್ಯವಿಲ್ಲ. ಒಂದು ವೇಳೆ ಸಮಸ್ಯೆ ಎದುರಿಸುತ್ತಿರುವ ವಿದ್ಯಾರ್ಥಿಗಳೇನಾದರೂ ನ್ಯಾಯಲಯದ ಮೆಟ್ಟಿಲೇರಿದರೆ ಆಗ ಪರಿಗಣಿಸಬಹುದು’ ಎಂಬ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿ ವಿಲೇವಾರಿ ಮಾಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.