ಬೆಂಗಳೂರು: ಪರಿಶಿಷ್ಟ ಪಂಗಡಗಳು ಮತ್ತು ಆದಿವಾಸಿ ಬುಡಕಟ್ಟು ಸಮುದಾಯಗಳಿಗೂ ಒಳಮೀಸಲಾತಿ ಕಲ್ಪಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಬೇಕು ಎಂಬ ನಿರ್ಣಯವನ್ನು ಆದಿವಾಸಿ ಬುಡಕಟ್ಟು ಸಮುದಾಯಗಳ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.

ಕರ್ನಾಟಕ ಅಲೆಮಾರಿ ಹಕ್ಕಿಪಿಕ್ಕಿ ಬುಡಕಟ್ಟು ಸಂರಕ್ಷಣ ಸಮಿತಿಯು ಶುಕ್ರವಾರ ಗಾಂಧಿ ಭವನದಲ್ಲಿ ಸಭೆ ಆಯೋಜಿಸಿತ್ತು. ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕನಾಥ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

‘ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲಾಗಿದೆ. ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಇದ್ದರೂ, ಪ್ರಬಲ ಸಮುದಾಯಗಳಿಗೆ ಮಾತ್ರವೇ ಅದು ಸಿಗುತ್ತಿದೆ. ಆದಿವಾಸಿ ಬುಡಕಟ್ಟು ಸಮುದಾಯಗಳಿಗೂ ಮೀಸಲಾತಿಯ ಲಾಭ ಸಿಗಬೇಕು ಅಂದರೆ, ಒಳಮೀಸಲಾತಿ ಜಾರಿಯಾಗಬೇಕು’ ಎಂದರು.

ಸಭೆಯಲ್ಲಿ ಭಾಗಿಯಾಗಿದ್ದ ವಿವಿಧ ಆದಿವಾಸಿ ಬುಡಕಟ್ಟು ಸಮುದಾಯಗಳ ಪ್ರತಿನಿಧಿಗಳು ಒಳಮೀಸಲಾತಿಗಾಗಿ ರಾಜ್ಯ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅದರಂತೆ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು.

‘ಪಟ್ಟಿಯಲ್ಲಿಲ್ಲ ಹಲವು ಬುಡಕಟ್ಟು’

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಆದಿವಾಸಿ ನಿಗಮ ಮತ್ತು ಆಯೋಗ ರಚನೆಯನ್ನು ಘೋಷಿಸಿದ್ದಾರೆ. ಈ ನಿಗಮ ರಚನೆ ಸಂಬಂಧ ಜೇನು ಕುರುಬ, ಕೊರಗ, ಇರುಳಿಗ, ಸೋಲಿಗ, ಪಣಿಯ, ಮಲೆಕುಡಿಯ, ಗೌಡಲು, ಹಸಲರು ಸೇರಿ 13 ಬುಡಕಟ್ಟು ಸಮುದಾಯಗಳನ್ನಷ್ಟೇ ಪರಿಗಣಿಸಲಾಗಿದೆ.
ಇತರ ಹತ್ತು ಬುಡಕಟ್ಟು ಸಮುದಾಯಗಳನ್ನು ಕೈಬಿಡಲಾಗಿದೆ’ ಎಂದು ಕರ್ನಾಟಕ
ಅಲೆಮಾರಿ ಹಕ್ಕಿಪಿಕ್ಕಿ ಬುಡಕಟ್ಟು ಸಂರಕ್ಷಣಾ ಸಮಿತಿ ಅಧ್ಯಕ್ಷ ಜಗ್ಗು ಹೇಳಿದರು. ‘ಆದಿವಾಸಿ ಬುಡಕಟ್ಟು ಸಮುದಾಯಗಳ ಅಡಿಯಲ್ಲಿ ಅರಣ್ಯವಾಸಿ ಹಕ್ಕಿಪಿಕ್ಕಿ, ಹರಿಣಿ ಶಿಕಾರಿ, ವಾಗ್ರಿ ಪಾರ್ಧಿ, ಅಡವಿ ಚಿಂಚಿಲ ಸೇರಿ ಇನ್ನೂ ಹತ್ತು ಸಮುದಾಯ ಗಳಿವೆ. ನಿಗಮ ಮತ್ತು ಆಯೋಗ ರಚನೆ ವೇಳೆ ಈ ಸಮುದಾಯಗಳನ್ನೂ ಪರಿಗಣಿಸಬೇಕು. ಈ ಬಗ್ಗೆ ಸರ್ಕಾರಕ್ಕೆ ಶೀಘ್ರ ಮನವಿ ಸಲ್ಲಿಸಲಾಗುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.