Live | ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಕ್ಷೇತ್ರವಾರು ಫಲಿತಾಂಶದ ಸಂಪೂರ್ಣ ವಿವರ ಇಲ್ಲಿದೆ
LIVE
ರಾಜ್ಯದ 5 ನಗರ ಸಭೆಗಳು ಸೇರಿ ಅವಧಿಪೂರ್ಣಗೊಂಡಿರುವ 58 ನಗರ ಸ್ಥಳೀಯ ಸಂಸ್ಥೆಗಳು ಮತ್ತು 59 ಗ್ರಾಮ ಪಂಚಾಯಿತಿಗಳಿಗೆ ಸೋಮವಾರ ನಡೆದ ಚುನಾವಣೆಯ ಮತಗಳ ಎಣಿಕೆ ಇಂದು ನಡೆಯಿತು. ಬಿಜೆಪಿ ಮೂರು ನಗರಸಭೆಗಳಲ್ಲಿ ಅಧಿಕಾರ ಹಿಡಿಯುವುದು ಖಚಿತವಾಗಿದ್ದು, ಹೊಸಪೇಟೆ ಮತ್ತು ಶಿರಾದಲ್ಲಿ ಅತಂತ್ರ ಪರಿಸ್ಥಿತಿ ಎದುರಾಗಿದೆ.ಮತಗಳ ಎಣಿಕೆ ಬೆಳಿಗ್ಗೆ 8ಕ್ಕೆ ಆಯಾ ನಗರ ಸ್ಥಳೀಯ ಸಂಸ್ಥೆಗಳ ಕೇಂದ್ರ ಸ್ಥಾನದಲ್ಲೇ ಆರಂಭವಾಗಿದೆ. ಚಿಕ್ಕಮಗಳೂರು, ತುಮಕೂರು ಜಿಲ್ಲೆಯ ಶಿರಾ, ಗದಗ–ಬೆಟಗೇರಿ, ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿ, ಹೊಸಪೇಟೆ ನಗರಸಭೆಗಳು, ವಿವಿಧ ಜಿಲ್ಲೆಗಳ 19 ಪುರಸಭೆಗಳು ಮತ್ತು 34 ಪಟ್ಟಣ ಪಂಚಾಯಿತಿಗಳ ಫಲಿತಾಂಶ ಹೊರಬಂದಿದೆ. 1,184 ವಾರ್ಡ್‌ಗಳಲ್ಲಿ 4,961 ಅಭ್ಯರ್ಥಿಗಳು ಚುನಾವಣೆ ಎದುರಿಸಿದ್ದಾರೆ. ಅಲ್ಲದೆ, ನಗರ ಸ್ಥಳೀಯ ಸಂಸ್ಥೆಗಳ 9 ವಾರ್ಡ್‌ಗಳಿಗೆ ಮತ್ತು ವಿವಿಧ ಗ್ರಾಮ ಪಂಚಾಯಿತಿಗಳ 401 ಸ್ಥಾನಗಳಿಗೂ ಉಪಚುನಾವಣೆ ನಡೆದಿತ್ತು.