ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ನಿಗಮದ ಭ್ರಷ್ಟಾಚಾರಕ್ಕೆ ರಾಜಕೀಯ ಬಣ್ಣ ಕೊಡಬೇಕಿಲ್ಲ: ಸಚಿವ ಖಂಡ್ರೆ

Published 10 ಜುಲೈ 2024, 10:32 IST
Last Updated 10 ಜುಲೈ 2024, 10:32 IST
ಅಕ್ಷರ ಗಾತ್ರ

ಬೀದರ್: ‘ವಾಲ್ಮೀಕಿ ನಿಗಮದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖಾ ತಂಡ ರಚಿಸಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದೆ. ಅದಕ್ಕೆ ರಾಜಕೀಯ ಬಣ್ಣ ಕೊಡುವ ಅವಶ್ಯಕತೆಯಿಲ್ಲ’ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ನಗರದಲ್ಲಿ ಬುಧವಾರ ಏರ್ಪಡಿಸಿದ್ದ ಲಕ್ಷ ವೃಕ್ಷ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರಿಗೆ ಪತ್ರಕರ್ತರು, ಮಾಜಿಸಚಿವ ಬಿ. ನಾಗೇಂದ್ರ ಅವರ ಮನೆ ಮೇಲೆ ಇಡಿ ದಾಳಿ ನಡೆಸಿದ ವಿಷಯದ ಕುರಿತು ಕೇಳಿದ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ಆರೋಪಿಗಳನ್ನು ಪತ್ತೆ ಹಚ್ಚಿದೆ. ಕಾನೂನು ಪ್ರಕಾರ ಅವರ ಮೇಲೆ ಕ್ರಮವಾಗಲಿದೆ. ಆದರೆ, ಅದಕ್ಕೆ ರಾಜಕೀಯ ಬಣ್ಣ ಕೊಡುವ ಅಗತ್ಯವಿಲ್ಲ. ಬಿಜೆಪಿಯವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ. ಆದರೆ, ಕಾಂಗ್ರೆಸ್‌ ಪಕ್ಷ ಎಲ್ಲದರಲ್ಲೂ ರಾಜಕೀಯ ಬೆರೆಸುವ ಕೆಲಸ ಮಾಡುವುದಿಲ್ಲ ಎಂದು ಹೇಳಿದರು.

ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡುತ್ತಿರುವುದಕ್ಕೆ ರಾಮನ ಹೆಸರು ತಳುಕು ಹಾಕುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ, ಬಿಜೆಪಿಯವರು ಜಾತಿ, ಜಾತಿಗಳಲ್ಲಿ, ಧರ್ಮ ಧರ್ಮಗಳ ನಡುವೆ ಒಡೆದಾಳುವ ನೀತಿ ಅನುಸರಿಸುತ್ತಾರೆ. ಕಾಂಗ್ರೆಸ್ ಪಕ್ಷ ರಾಮ್‌, ರಹೀಂ ಎಲ್ಲರೂ ಒಂದೇ ಎಂದು ನಂಬಿದೆ. ರಾಮನಗರದ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT