ಸಾಗರ: ‘ಪಶ್ಚಿಮ ಬಂಗಾಳದಲ್ಲಿ ದೊಡ್ಡ ಸಂಖ್ಯೆಯ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಕುತಂತ್ರದಿಂದಲೇ ಬಿಜೆಪಿ ಜಯಗಳಿಸಿದೆ. ರಾಜ್ಯದಲ್ಲಿ ಆ ರೀತಿ ಆಗಲು ಅವಕಾಶ ನೀಡುವುದಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು.

ಖಾಸಗಿ ಕಾರ್ಯಕ್ರಮವೊಂದಕ್ಕೆ ಭಾನುವಾರ ಇಲ್ಲಿಗೆ ಆಗಮಿಸಿದ್ದ ಅವರು ಪ್ರವಾಸಿ ಮಂದಿರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದರು. ‘ಅಂದಾಜು 93 ಲಕ್ಷ ಮತದಾರರಿಗೆ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಸಿಕ್ಕಿಲ್ಲ. ಬಿಜೆಪಿ ನಡೆಸಿರುವ ಇಂತಹ ಅಕ್ರಮಗಳ ವಿರುದ್ಧ ಕಾಂಗ್ರೆಸ್ ಪಕ್ಷ ಜನಾಂದೋಲನ ರೂಪಿಸಲಿದೆ’ ಎಂದು ತಿಳಿಸಿದರು.

‘ಈವರೆಗೆ ಸಿಬಿಐ, ಇ.ಡಿ ಮೊದಲಾದ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ತಮ್ಮ ರಾಜಕೀಯ ಎದುರಾಳಿಗಳನ್ನು ಹಿಮ್ಮೆಟ್ಟಿಸುವ ದಾರಿಯನ್ನು ಬಿಜೆಪಿ ಕಂಡುಕೊಂಡಿತ್ತು. ಅದರ ಮುಂದುವರಿದ ಭಾಗವಾಗಿ ಈಗ ಮತದಾರರ ಪಟ್ಟಿಯನ್ನೇ ತಮಗೆ ಬೇಕಾದಂತೆ ಸಿದ್ಧಪಡಿಸುವ ಅಕ್ರಮಕ್ಕೆ ಅದು ಮುಂದಾಗಿದೆ’ ಎಂದು ಆರೋಪಿಸಿದರು.

‘ಪಂಚ ರಾಜ್ಯಗಳ (ನಾಲ್ಕು ರಾಜ್ಯ, ಒಂದು ಕೇಂದ್ರಾಡಳಿತ ಪ್ರದೇಶ) ವಿಧಾನಸಭೆ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ಗೆ ತೀರಾ ಹಿನ್ನಡೆಯೇನೂ ಆಗಿಲ್ಲ. ಅಸ್ಸಾಂನಲ್ಲಿ ನಾವು ಸೋತಿದ್ದರೂ ಕೇರಳದಲ್ಲಿ ಗೆದ್ದಿದ್ದೇವೆ. ತಮಿಳುನಾಡಿನಲ್ಲಿ ಟಿವಿಕೆ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ಹೊಸ ರಾಜಕೀಯ ಶಕ್ತಿಯ ಉದಯಕ್ಕೆ ಕಾಂಗ್ರೆಸ್ ಪ್ರೇರಣೆ ನೀಡಿದೆ’ ಎಂದ ತಿಳಿಸಿದರು.

‘ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯ ಮಾತನಾಡುವುದು ಪಕ್ಷ ವಿರೋಧಿ ಚಟುವಟಿಕೆಯಾಗುತ್ತದೆ. ಈ ಬಗ್ಗೆ ಪಕ್ಷದ ಹೈಕಮಾಂಡ್ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಬದಲಾವಣೆಯ ಸಂದರ್ಭ ಬಂದರೆ ಹೈಕಮಾಂಡ್ ಈ ಕುರಿತು ತೀರ್ಮಾನ ತೆಗೆದುಕೊಳ್ಳುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದೇ ವೇಳೆ ಸಾಗರದ ಜೋಗ ರಸ್ತೆಯಲ್ಲಿ ಪ್ರಾಂತ್ಯ ಆರ್ಯ ಈಡಿಗರ ಸಂಘ ನಿರ್ಮಿಸಲಿರುವ ನೂತನ ವಿದ್ಯಾರ್ಥಿ ನಿಲಯ ಕಟ್ಟಡಕ್ಕೆ ಅನುದಾನ ನೀಡುವಂತೆ ಕೋರಿ ಸಂಘದ ವತಿಯಿಂದ ಬಿ.ಕೆ. ಹರಿಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರಮುಖರಾದ ಮಂಜಪ್ಪ ಮರಸ, ಕಲಸೆ ಚಂದ್ರಪ್ಪ, ಅನಿತಾಕುಮಾರಿ, ತುಕಾರಾಂ ಶಿರವಾಳ, ತಾರಾಮೂರ್ತಿ, ಮಹಾಬಲ ಕೌತಿ, ಕಿರಣ ದೊಡ್ಮನೆ, ಪರಮೇಶ್ವರ್, ಈಶ್ವರ್ ನಾಯ್ಕ್ ಕುಗ್ವೆ, ರವಿ ಕುಗ್ವೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-42-1457599984

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.