ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುಂದಿನ ಐದು ದಿನ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Published 6 ಜೂನ್ 2024, 15:19 IST
Last Updated 6 ಜೂನ್ 2024, 15:19 IST
ಅಕ್ಷರ ಗಾತ್ರ

ಬೆಂಗಳೂರು: ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಮುಂದಿನ ಐದು ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಇದೇ 10ರವರೆಗೆ ರಾಜ್ಯದ ಕೆಲ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗೆ ಶುಕ್ರವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಜತೆಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಯಾದಗಿರಿ ಜಿಲ್ಲೆ ಸೇರಿದಂತೆ ಈ ಮೇಲಿನ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಜತೆಗೆ 30 ರಿಂದ 40 ಕಿ.ಮೀ. ಗಾಳಿ ಬೀಸುವ ಸಂಭವವಿದೆ ಎಂದು ಇಲಾಖೆ ಹೇಳಿದೆ. 

ಮೀನುಗಾರರಿಗೆ ಎಚ್ಚರಿಕೆ: ಕರಾವಳಿಯಲ್ಲಿ ಶುಕ್ರವಾರ ಗಂಟೆಗೆ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ಮುನ್ಸೂಚನೆ ನೀಡಿದೆ. 

ಇದೇ 8ರಿಂದ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಒಂದೆರಡು ಕಡೆ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳು ಒಳನಾಡಿನಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಿಂದ ಕಡಿಮೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT