ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಗಸ್ಟ್‌ 6ರವರೆಗೆ ರಾಜ್ಯದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ

Published : 2 ಆಗಸ್ಟ್ 2024, 15:44 IST
Last Updated : 2 ಆಗಸ್ಟ್ 2024, 15:44 IST
ಫಾಲೋ ಮಾಡಿ
Comments

ಬೆಂಗಳೂರು: ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಇದೇ 6ರವರೆಗೆ ಗಾಳಿ ಸಹಿತ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿನ ಕೆಲ ಸ್ಥಳಗಳಲ್ಲಿ ನಿರಂತರ ಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಂಭವವಿದೆ. ಬೆಳಗಾವಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಈ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯೊಂದಿಗೆ ಗಾಳಿಯ ವೇಗವು 30ರಿಂದ 40 ಕಿ.ಮೀ ತಲುಪುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ.

ಕರಾವಳಿ ಉದ್ದಕ್ಕೂ ಬಿರುಗಾಳಿಯಿಂದ ಕೂಡಿದ ಹವಾಮಾನ ಇರಲಿದೆ. ಗಂಟೆಗೆ 35ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ, ಮೀನುಗಾರರು ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ತಿಳಿಸಿದೆ. 

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು 30ರಿಂದ 40 ಕಿ.ಮೀ ತಲುಪುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಇದೇ 6 ರವರೆಗೂ ಭಾರಿ ಮಳೆ ಮುಂದುವರಿಯಲಿದೆ. ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT