ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದ ವಿವಿಧೆಡೆ ಮೂರು ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Published : 22 ಸೆಪ್ಟೆಂಬರ್ 2024, 15:37 IST
Last Updated : 22 ಸೆಪ್ಟೆಂಬರ್ 2024, 15:37 IST
ಫಾಲೋ ಮಾಡಿ
Comments

ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರದಿಂದ ಮೂರು ದಿನಗಳು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗೆ ಭಾನುವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ಸೋಮವಾರವೂ ಕಲಬುರಗಿ ಸೇರಿ ಏಳು ಜಿಲ್ಲೆಗಳಿಗೆ, ಮಂಗಳವಾರ ಉತ್ತರ ಒಳನಾಡಿನ ನಾಲ್ಕು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. 

ಬೆಂಗಳೂರಿನಲ್ಲಿ ಭಾನುವಾರ ಹಾಗೂ ಸೋಮವಾರ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT