ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Weather: ರಾಜ್ಯದಲ್ಲಿ ಹೆಚ್ಚಿದ ತಾಪಮಾನ

Published 3 ಮಾರ್ಚ್ 2024, 15:07 IST
Last Updated 3 ಮಾರ್ಚ್ 2024, 15:07 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಹೆಚ್ಚಾಗಿದೆ. ಅಲ್ಲದೇ, ರಾಜ್ಯದಾದ್ಯಂತ ಒಣ ಹವೆ ಮುಂದುವರಿದಿದ್ದು, ಮಧ್ಯಾಹ್ನದ ವೇಳೆಯಲ್ಲಿ ಬಿಸಿಗಾಳಿ ಬೀಸುತ್ತಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಭಾನುವಾರ ಗರಿಷ್ಠ ಉಷ್ಣಾಂಶ 38.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಈ ಜಿಲ್ಲೆಯಲ್ಲಿ ಬಿಸಿಲಿನ ಝಳ ಹೆಚ್ಚಾಗಿದ್ದು ವೃದ್ಧರು ಹಾಗೂ ಮಕ್ಕಳು ಮನೆಯಿಂದ ಹೊರ ಬರುವುದಕ್ಕೆ ಪರದಾಡುತ್ತಿದ್ದಾರೆ. 

ಮುಂದಿನ ಎರಡು ದಿನಗಳಲ್ಲಿ ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2– 3 ಡಿಗ್ರಿ ಸೆಲ್ಸಿಯಸ್‌ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲೂ ನಿರ್ಮಲ ಆಕಾಶವಿದ್ದು, ನಗರ ಹಾಗೂ ಹೊರವಲಯದಲ್ಲಿ ತಾಪಮಾನ ಏರಿಕೆಯಾಗಿದೆ. ಬೆಂಗಳೂರು ನಗರ ಭಾಗದಲ್ಲಿ ಭಾನುವಾರ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್, ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್‌) 33.9, ಎಚ್‌ಎಎಲ್‌ ಸುತ್ತಮುತ್ತ 32.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT