ಬೆಂಗಳೂರು: ರಾಜ್ಯದ ವಿವಿಧೆಡೆ ಬುಧವಾರದಿಂದ ಮುಂದಿನ ಒಂದು ವಾರ ಭಾರಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೀದರ್, ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆ ಬಿಟ್ಟು, ರಾಜ್ಯದ ಉಳಿದ ಎಲ್ಲ ಜಿಲ್ಲೆಗಳಿಗೆ ಬುಧವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಾಗಲಕೋಟೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಯ ಕೆಲ ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ರಾಮನಗರ, ಚಾಮರಾಜನಗರ, ವಿಜಯನಗರ, ಶಿವಮೊಗ್ಗ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ ಮತ್ತು ತುಮಕೂರಿನ ಕೆಲವೆಡೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲ ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 24ರಿಂದ ರಾಜ್ಯದಾದ್ಯಂತ ಗಾಳಿಯ ತೀವ್ರತೆ ಕಡಿಮೆಯಾಗಿ, ಕೆಲವೆಡೆ ಮಳೆ ಮುಂದುವರಿಯುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಕೆಲವೆಡೆ ಮಳೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ಬೆಳಗಾವಿಯ ಬೈಲಹೊಂಗಲದಲ್ಲಿ ತಲಾ 6 ಸೆಂ.ಮೀ. ಮಳೆ ಸುರಿದಿದೆ. ಚಿತ್ರದುರ್ಗದ ನಾಯಕನಹಟ್ಟಿ, ತುಮಕೂರಿನ ವೈ.ಎನ್. ಹೊಸಕೋಟೆ ಹಾಗೂ ಮಂಡ್ಯದ ಮದ್ದೂರಿನಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ. ಉಳಿದೆಡೆ ಇದಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಬಿದ್ದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.