ಬೆಂಗಳೂರು: ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಹಲವು ಕಾನೂನುಗಳು ಇದ್ದರೂ, ಅವರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಎರಡು ವರ್ಷ, ಏಳು ತಿಂಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ 43,053 ದೌರ್ಜನ್ಯ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿವೆ.

2023 ರಿಂದ 2025ರ ಜುಲೈ ಅವಧಿಯಲ್ಲಿ ಅತ್ಯಾಚಾರ, ಲೈಂಗಿಕ ಕಿರುಕುಳ, ವರದಕ್ಷಿಣೆ ಕಿರುಕುಳ ಹಾಗೂ ಸಾವು, ಗಂಡನಿಂದ ಕಿರುಕುಳ, ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ-2012), ಬಾಲ್ಯ ವಿವಾಹ, ಬಾಲ ಕಾರ್ಮಿಕ, ಮಕ್ಕಳ ರಕ್ಷಣೆ ಮತ್ತು ಆರೈಕೆ ಕಾಯ್ದೆ (ಜೆ.ಜೆ.ಕಾಯ್ದೆ) ಅಡಿ 43 ಸಾವಿರಕ್ಕೂ ಹೆಚ್ಚು ಮಹಿಳೆಯರು ಹಾಗೂ ಮಕ್ಕಳ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ, ವರದಕ್ಷಿಣೆ ಕಿರುಕುಳ ಹಾಗೂ ಪೋಕ್ಸೊ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆಯೇ ಅಧಿಕವಾಗಿದೆ.

ಕೆಲಸದ ಸ್ಥಳ ಸೇರಿದಂತೆ ಬೇರೆ ಬೇರೆ ಕಡೆಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದಕ್ಕೆ ಸಂಬಂಧಿಸಿದಂತೆ 16,273 ಪ್ರಕರಣಗಳು ದಾಖಲಾಗಿವೆ. ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದಂತೆ ಒಟ್ಟು 5,456 ಪ್ರಕರಣಗಳು ದಾಖಲಾಗಿದ್ದು, ವರದಕ್ಷಿಣೆ ಕಿರುಕುಳದಿಂದಲೇ 340 ಗೃಹಿಣಿಯರು ಮೃತಪಟ್ಟಿದ್ದಾರೆ. ಗಂಡನ ಕಿರುಕುಳಕ್ಕೆ ಸಂಬಂಧಿಸಿದಂತೆ 7,546 ಪ್ರಕರಣಗಳು ದಾಖಲಾಗಿವೆ ಎಂಬುದು ಪೊಲೀಸ್ ಇಲಾಖೆಯ ಅಂಕಿ–ಅಂಶಗಳಿಂದ ಗೊತ್ತಾಗಿದೆ.

ಅತ್ಯಾಚಾರ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿವೆ. 2023ರಲ್ಲಿ 600, 2024ರಲ್ಲಿ 739 ಹಾಗೂ 2025ರ ಜುಲೈವರೆಗೆ 549 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಪೋಕ್ಸೊ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, 2023ರಲ್ಲಿ 3,902, 2024ರಲ್ಲಿ 4,064 ಹಾಗೂ 2025ರ ಜುಲೈವರೆಗೆ 2,544 ಪ್ರಕರಣಗಳು ದಾಖಲಾಗಿವೆ.

‘ಬಡತನ, ಅನಕ್ಷರತೆ, ಕಾನೂನಿನ ಕುರಿತು ಸಮರ್ಪಕ ಮಾಹಿತಿ ಇಲ್ಲದಿರುವುದರಿಂದ ಮಹಿಳೆಯರು ಹಾಗೂ ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಸಂತ್ರಸ್ತ ಮಹಿಳೆಯರಿಗೆ ಮಹಿಳಾ ಆಯೋಗವು ಪೊಲೀಸ್ ಇಲಾಖೆಯ ಸಹಕಾರದ ಮೂಲಕ ರಕ್ಷಣೆ ಒದಗಿಸುವುದರ ಜೊತೆಗೆ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತಿದೆ’ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಿ ಅತ್ಯಾಚಾರ ಪೋಕ್ಸೊದಂತಹ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಆರೋಪಿಗಳಿಗೆ ಶಿಕ್ಷೆ ವಿಧಿಸುವ ಮೂಲಕ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು‘

-ಡಾ. ನಾಗಲಕ್ಷ್ಮೀ ಚೌಧರಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ

‘ಕಾವಲು ಸಮಿತಿಯ ಮೂಲಕ ಜಾಗೃತಿ’ ಪೋಕ್ಸೊ ಬಾಲ್ಯ ವಿವಾಹಗಳನ್ನು ನಿಯಂತ್ರಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕಾವಲು ಸಮಿತಿಗಳನ್ನು ರಚಿಸಲಾಗಿದೆ. ಇಲ್ಲಿ ಪೋಕ್ಸೊ ಬಾಲಕಾರ್ಮಿಕ ಪದ್ಧತಿ ಬಾಲ್ಯ ವಿವಾಹದ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಕ್ಷಣ ಆರೋಗ್ಯ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ’ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.