ಕಾರವಾರ: ಜೂನ್ 1ರಿಂದ ಜುಲೈ 31ರ ವರೆಗೆ ಜಿಲ್ಲೆಯು ಸೇರಿದಂತೆ ರಾಜ್ಯದ ಕರಾವಳಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ಚಟುವಟಿಕೆ ನಿಷೇಧಿಸಿ, ಮೀನುಗಾರಿಕೆ ಇಲಾಖೆ ಆದೇಶಿಸಿದೆ.

‘10 ಅಶ್ವಶಕ್ತಿಗಿಂತ (ಎಚ್ಪಿ) ಅಧಿಕ ಸಾಮರ್ಥ್ಯದ ಇನ್ಬೋರ್ಡ್ ಅಥವಾ ಔಟ್ಬೋರ್ಟ್ ಯಂತ್ರ ಅಳವಡಿಸಿರುವ ಮೀನುಗಾರಿಕೆ ದೋಣಿಗಳಲ್ಲಿ ಯಾವುದೇ ಬಲೆಗಳನ್ನು, ಸಾಧನಗಳನ್ನು ಉಪಯೋಗಿಸಿ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಗಳನ್ನು ಮುಂದಿನ ಎರಡು ತಿಂಗಳು ಕೈಗೊಳ್ಳಬಾರದು. ಎಲ್ಲ ದೋಣಿಗಳನ್ನು ಬಂದರು ಪ್ರದೇಶಗಳಲ್ಲಿ ಲಂಗರು ಹಾಕಿಡಬೇಕು. ನಿಯಮ ಉಲ್ಲಂಘಿಸಿದರೆ ಸರ್ಕಾರದ ಸೌಲಭ್ಯಗಳನ್ನು ರದ್ದುಪಡಿಸಲಾಗುತ್ತದೆ’ ಎಂದು ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

‘ನಿಷೇಧಿತ ಅವಧಿಯಲ್ಲಿ ದೋಣಿಗಳನ್ನು ಸಾಗಿಸುವ ಉದ್ದೇಶಕ್ಕಾಗಿ 10 ಎಚ್ಪಿ ಸಾಮರ್ಥ್ಯದ ಮೋಟಾರೀಕೃತ ದೋಣಿ ಮತ್ತು ಸಾಂಪ್ರದಾಯಿಕ ನಾಡದೋಣಿಗಳನ್ನು ಬಳಸಿಕೊಂಡು ಸುರಕ್ಷತಾ ಕ್ರಮಗಳೊಂದಿಗೆ ಮೀನುಗಾರಿಕೆ ನಡೆಸಬಹುದು. ಆದರೆ, ಹವಾಮಾನ ವೈಪರೀತ್ಯದ ಎಚ್ಚರಿಕೆ ಆಧರಿಸಿ ಈ ಚಟುವಟಿಕೆಗಳು ನಡೆಯಬೇಕು’ ಎಂದು ಸೂಚಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-20-1585974359

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.