ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೆಜೆಟೆಡ್‌ ಪ್ರೊಬೇಷನರಿ: 3 ವರ್ಷ ವಯೋಮಿತಿ ಸಡಿಲಿಕೆ

Published 25 ಜನವರಿ 2024, 15:40 IST
Last Updated 25 ಜನವರಿ 2024, 15:40 IST
ಅಕ್ಷರ ಗಾತ್ರ

ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಗ್ರೂಪ್‌ ‘ಎ’ ಮತ್ತು ಗ್ರೂಪ್‌ ‘ಬಿ’ ಹುದ್ದೆಗಳ ಭರ್ತಿಗೆ ಹೊರಡಿಸುವ ಅಧಿಸೂಚನೆಯಲ್ಲಿ ಅರ್ಹ ಎಲ್ಲ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಸಿ  ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಕೋವಿಡ್ ಮತ್ತು ಇತರ ಕಾರಣಗಳಿಂದ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ 2021ನೇ ಸಾಲಿನಿಂದ ಪರೀಕ್ಷೆಗಳನ್ನು ನಡೆಸಿಲ್ಲ. ಹೀಗಾಗಿ, ನೇಮಕಾತಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿ ಮೀರಿ ಉದ್ಯೋಗ ವಂಚಿತರಾಗುವುದರಿಂದ, ವಯೋಮಿತಿ ಸಡಿಲಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಹುದ್ದೆ ಆಕಾಂಕ್ಷಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಜ. 5ರಂದು ನಡೆದ ಸಚಿವ ಸಂಪುಟ ಸಭೆಯ ತೀರ್ಮಾನದಂತೆ, ಎಲ್ಲ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಒಂದು ಬಾರಿ ಗರಿಷ್ಠ ವಯೋಮಿತಿಯನ್ನು 3 ವರ್ಷಗಳಿಗೆ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT