ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಮ್ಮ ಮಠಗಳ ಶಾಲೆಗಳಿಗೆ ಮೊಟ್ಟೆ ಬೇಡ: ಕಾಶಿ, ಶ್ರೀಶೈಲ ಶ್ರೀಗಳ ಒತ್ತಾಯ

Published : 13 ಸೆಪ್ಟೆಂಬರ್ 2024, 15:53 IST
Last Updated : 13 ಸೆಪ್ಟೆಂಬರ್ 2024, 15:53 IST
ಫಾಲೋ ಮಾಡಿ
Comments

ಬೆಂಗಳೂರು: ವೀರಶೈವ-ಲಿಂಗಾಯತ ಸೇರಿದಂತೆ ವಿವಿಧ ಧರ್ಮ ಪೀಠಗಳು, ಮಠಗಳು ನಡೆಸುವ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡಬಾರದು ಎಂದು ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ಶ್ರೀಶೈಲ ಪೀಠದ ಚೆನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದ ಆರು ದಿನ ಬೇಯಿಸಿದ ಮೊಟ್ಟೆ ನೀಡಲು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸೆ. 25ರಂದು ಯಾದಗಿರಿಯಲ್ಲಿ ಚಾಲನೆ ನೀಡುವುದಾಗಿ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.  ಬಹುತೇಕ ಮಠ-ಮಂದಿರಗಳ ಶಿಕ್ಷಣ ಸಂಸ್ಥೆಗಳು ನಡೆಸುತ್ತಿರುವ ಶಾಲೆಗಳು ಮಠ-ಪೀಠಗಳ ಆವರಣದಲ್ಲಿಯೇ ನಡೆಯುತ್ತಿವೆ. ಅಲ್ಲಿಯ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಮಾಡುವುದು ಧಾರ್ಮಿಕ ತತ್ವ-ಸಿದ್ಧಾಂತಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ.

ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದ ರೀತಿ ಶಾಲಾ ಶಿಕ್ಷಣ ಇಲಾಖೆ ಆದೇಶಗಳನ್ನು ಹೊರಡಿಸಬೇಕು. ಮಠ, ಮಂದಿರಗಳು ತಮ್ಮ ಸ್ವಂತ ಖರ್ಚಿನಲ್ಲಿಯೇ ಶಾಲೆಗಳನ್ನು ತೆರೆದು ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿವೆ. ಈಗ ಸರ್ಕಾರದ ಅನುದಾನ ಪಡೆಯುತ್ತಿರುವ ಕಾರಣಕ್ಕೆ ಆದೇಶಗಳನ್ನು ಬಲವಂತವಾಗಿ ಹೇರಬಾರದು ಎಂದು ಹೇಳಿದ್ದಾರೆ.

ಬಾಳೆಹಣ್ಣು-ಶೇಂಗಾಚಿಕ್ಕಿಗೆ ಕೋರಿಕೆ: ಮೊಟ್ಟೆ ನಿರಾಕರಿಸುವ ಮಕ್ಕಳಿಗೆ ನೀಡಿದಂತೆ ಮಠ-ಮಂದಿರಗಳು ನಡೆಸುವ ಶಾಲಾ ವಿದ್ಯಾರ್ಥಿಗಳಿಗೆ ನಿತ್ಯವೂ ಬಾಳೆಹಣ್ಣು ಹಾಗೂ ಶೇಂಗಾಚಿಕ್ಕಿ ವಿತರಣೆ ಮಾಡಲು ಪರಿಷ್ಕೃತ ಆದೇಶ ಹೊರಡಿಸಬೇಕು ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT