ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಾಲ ಮನ್ನಾದ ಬಳಿಕವೂ ಆರ್ಥಿಕ ಶಿಸ್ತು’

Last Updated 5 ಮಾರ್ಚ್ 2019, 19:59 IST
ಅಕ್ಷರ ಗಾತ್ರ

ಬೆಂಗಳೂರು: ‘ರೈತರ ಸಾಲ ಮನ್ನಾ ಮಾಡಿದ ಬಳಿಕವೂ ಸಮ್ಮಿಶ್ರ ಸರ್ಕಾರ ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡು ಬಂದಿದೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ನಗರದಲ್ಲಿ ಮಂಗಳವಾರ ಆಯೋಜಿಸಿದ್ದ, ಕೆಎಸ್‌ಎಫ್‌ಸಿ ಮತ್ತು ಇತರ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಮತ್ತು ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ನಮ್ಮದು ಜನರಿಗಾಗಿ ಇರುವ ಸರ್ಕಾರ, ನಾನು ಅಧಿಕಾರದಲ್ಲಿ ಇರುವವರೆಗೂ ಎಲ್ಲರೂ ಚೆನ್ನಾಗಿರಬೇಕು. ಅದಕ್ಕಾಗಿಸಮ್ಮಿಶ್ರ ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ’ ಎಂದು ಹೇಳಿದರು.

‘ಕೈಗಾರಿಕೆಗಳು ಲಕ್ಷಾಂತರ ಜನರಿಗೆ ಉದ್ಯೋಗವಕಾಶವನ್ನು ಕಲ್ಪಿಸಿವೆ. ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಒಂಬತ್ತು ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್‌ಗಳನ್ನು ಸ್ಥಾಪಿಸಲಾಗುತ್ತಿದ್ದು,ಉದ್ಯೋಗ ಸೃಷ್ಟಿಯಾಗಲಿದೆ. ಕೃಷಿ ಸಂಬಂಧಿತ ಕೈಗಾರಿಕೆಗಳಲ್ಲಿ ಆಹಾರ ಸಂಸ್ಕರಣೆ ಸೇರಿದಂತೆಸಾಕಷ್ಟು ಅವಕಾಶಗಳಿವೆ. ಅವುಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

ಶಾಸಕ ವಿ.ಸೋಮಣ್ಣ,‘ನಾನು ದೇವೇಗೌಡರ ಗರಡಿಯಲ್ಲಿ ಬೆಳೆದವನು, ಕುಮಾರಸ್ವಾಮಿಯವರು ಕೆಲಸ ಮಾಡುವುದರಲ್ಲಿ ಅವರ ಅಪ್ಪನಿಗಿಂತ ಒಂದು ಹೆಜ್ಜೆ ಮುಂದೆ ಇದ್ದಾರೆ’ ಎಂದು ಅಭಿಪ್ರಾಯಪಟ್ಟರು.

‘ಅದೃಷ್ಟ ಯಾರ ಮನೆಯ ಆಸ್ತಿ ಅಲ್ಲ. ಹಾಗಾಗಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು’ ಎಂದರು.

ಸಣ್ಣ ಉದ್ಯಮಿಗಳಿಗೆ ನೀಡುವ ಸಾಲದ ಮರುಪಾವತಿ ಅವಧಿಯನ್ನು ಐದು ವರ್ಷದಿಂದ ಹತ್ತು ವರ್ಷಕ್ಕೆ ಹೆಚ್ಚಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕಾಸಿಯಾ ಅಧ್ಯಕ್ಷ ಎಸ್‌.ಬಸವರಾಜ ಜವಳಿ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು. ಯೋಜನೆಗಳ ಕುರಿತು ಅರಿವು ಮೂಡಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT