ಬೆಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು (ಕೆಎಸ್‌ಟಿಎ) ಜೀವಮಾನ ಸಾಧನೆಗೆ ನೀಡುವ 2019 ಮತ್ತು 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಇಸ್ರೊ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್, ವಿಜ್ಞಾನ ಲೇಖಕ ನಾಗೇಶ್ ಹೆಗಡೆ ಸೇರಿದಂತೆ ಆರು ಮಂದಿ ಆಯ್ಕೆಯಾಗಿದ್ದಾರೆ.

ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಕೃಷಿ ಮತ್ತು ವೈದ್ಯಕೀಯ ಕ್ಷೇತ್ರಗಳಲ್ಲಿ ಅನನ್ಯ ಕೊಡುಗೆ ನೀಡಿದ ನಾಡಿನ ಶ್ರೇಷ್ಠ ವಿಜ್ಞಾನಿಗಳು, ತಂತ್ರಜ್ಞಾನಿಗಳು ಹಾಗೂ ಕನ್ನಡದ ವಿಜ್ಞಾನ ಸಂವಹನ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಅಕಾಡೆಮಿ ಗೌರವಿಸುತ್ತಿದೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಡಾ. ಗೋಡ್ಬೋಲೆ ರೋಹಿಣಿ ಮಧುಸೂದನ್, ಧಾರವಾಡದ ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಂ. ಮಹದೇವಪ್ಪ, ಬೆಂಗಳೂರು ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಸಿ. ಕಾಮೇಶ್ವರ ರಾವ್ ಹಾಗೂ ಮನೋವೈದ್ಯ ಡಾ.ಸಿ.ಆರ್. ಚಂದ್ರಶೇಖರ್ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಈ ಪ್ರಶಸ್ತಿಯು ತಲಾ ₹ 1 ಲಕ್ಷ ನಗದು ಬಹುಮಾನ ಹಾಗೂ ಚಿನ್ನದ ಪದಕ ಒಳಗೊಂಡಿದೆ. ಮಾ.2ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಯಲಹಂಕದಲ್ಲಿರುವ ಅಕಾಡೆಮಿಯ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.