ಬೆಳಗಾವಿ: ‘ಕಸ್ತೂರಿರಂಗನ್ ಸಮಿತಿಯ ವರದಿಯನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ. ಅದನ್ನು ಸಚಿವ ಸಂಪುಟದಲ್ಲಿ
ತಿರಸ್ಕರಿಸಲಾಗುವುದು’ ಎಂದು ಅರಣ್ಯ ಸಚಿವ ಆರ್. ಶಂಕರ್ ಹೇಳಿದರು.

ಬುಧವಾರ ವಿಧಾನ ಪರಿಷತ್ನಲ್ಲಿ ಕಸ್ತೂರಿ ರಂಗನ್ ವರದಿ ಬಗ್ಗೆ ಐವನ್ ಡಿಸೋಜಾ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರ 4ನೇ ಕರಡು ಅಧಿಸೂಚನೆ ಹೊರಡಿಸಿದೆ. 2019ರ ಜ.03ರವರೆಗೆ ಆಕ್ಷೇಪಣೆಗೆ ಅವಕಾಶ ಮಾಡಿಕೊಡಲಾಗಿದೆ ಎಂದರು.

ಕಸ್ತೂರಿರಂಗನ್ ವರದಿ ಅನುಷ್ಠಾನಗೊಳಿಸುವುದರಿಂದ ಪಶ್ಚಿಮಘಟ್ಟ ಪ್ರದೇಶದಲ್ಲಿನ ಕೈಗಾರಿಕೆ ಕಲ್ಲು ಗಣಿಗಾರಿಕೆ, ಮರಳು ಗಣಿಗಾರಿಕೆ, ಪ್ರದೇಶದ ಅಭಿವೃದ್ಧಿ, ಜಲ ವಿದ್ಯುತ್ ಮತ್ತಿತರರ ಕಾರ್ಯಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಹೀಗಾಗಿ ತಿರಸ್ಕರಿಸುವುದು ಅನಿವಾರ್ಯ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.