ಬೆಂಗಳೂರು: ಕೆ.ಸಿ ವ್ಯಾಲಿ 2ನೇ ಹಂತದ ಅಡಿಯಲ್ಲಿ ಲಕ್ಷ್ಮೀಸಾಗರ ಪಂಪ್ಹೌಸ್ನಿಂದ ಕೋಲಾರ ಜಿಲ್ಲೆಯ, ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.

ಕಾವೇರಿ ನಿವಾಸದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ವರ್ಚ್ಯುವಲ್ ಆಗಿ ಯೋಜನೆಯನ್ನು ಲೋಕಾರ್ಪಣೆ ಮಾಡಿದರು.

‘ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಮ್ಮ ಹಿಂದಿನ ಸರ್ಕಾರ ಕೈಗೊಂಡ ಯೋಜನೆಗಳು, ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸಿವೆ. ಈ ಭಾಗದ 250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ. ಕೆ.ಸಿ.ವ್ಯಾಲಿ ಯೋಜನೆಯ ಎರಡನೇ ಹಂತವು ಡಿಸೆಂಬರ್ ಅಂತ್ಯದ ಒಳಗೆ ಪೂರ್ಣಗೊಳ್ಳಲಿದ್ದು, ಇದರಿಂದ 272 ಕೆರೆಗಳನ್ನು ತುಂಬಿಸಲು ಸಾಧ್ಯವಾಗಲಿದೆ’ ಎಂದು ಅವರು ಹೇಳಿದರು.

‘ಸಂಸ್ಕರಿಸಿದ ನೀರು ಬಳಕೆಗೆ ಯೋಗ್ಯವಲ್ಲ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಬೆಳೆಗಳಿಗೆ, ದನಕರುಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ನಿರೂಪಿತವಾಗಿದೆ. ಜನರು, ರೈತರು ಈ ಯೋಜನೆಗಳ ಅನುಕೂಲ ಪಡೆಯುತ್ತಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.