ನವದೆಹಲಿ: ಎಚ್.ಎನ್ ವ್ಯಾಲಿ ಹಾಗೂ ಕೆ.ಸಿ ವ್ಯಾಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ (ಎಸ್ಟಿಪಿ) ನೀರನ್ನು ಮೂರನೇ ಹಂತದಲ್ಲಿ ಸಂಸ್ಕರಿಸಲು ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಪಾದಯಾತ್ರೆ ನಡೆಸಿ ಹೋರಾಟ ಮಾಡುತ್ತೇವೆ ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದರು.

ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಚ್.ಎನ್ ವ್ಯಾಲಿ, ಕೆ.ಸಿ ವ್ಯಾಲಿ ಯೋಜನೆಯಡಿ ಚಿಕ್ಕಬಳ್ಳಾಪುರ, ಕೋಲಾರ ಭಾಗಕ್ಕೆ 2 ಹಂತಗಳಲ್ಲಿ ನೀರು ಸಂಸ್ಕರಣೆಯಾಗಿ ಬರುತ್ತಿದೆ. ಆದರೆ, ಇತ್ತೀಚೆಗೆ ಈ ನೀರು ಸರಿಯಾಗಿ ಸಂಸ್ಕರಣೆಯಾಗುತ್ತಿಲ್ಲ ಎಂಬ ದೂರುಗಳು ಬಂದಿವೆ. ಈ ಬಗ್ಗೆ ಜಲಮಂಡಳಿ ಅಧಿಕಾರಿಗಳಿಗೆ ಸರ್ಕಾರ ಕಟ್ಟುನಿಟ್ಟಾದ ಸೂಚನೆ ನೀಡಬೇಕಿದೆ’ ಎಂದರು.

‘ಸಿಂಗಪುರದಲ್ಲಿ ಕೊಳಚೆ ನೀರನ್ನು ಕುಡಿಯುವ ಮಟ್ಟಕ್ಕೆ ಶುದ್ಧೀಕರಣ ಮಾಡಲಾಗುತ್ತಿದೆ. ತೃತೀಯ ಹಂತದ ಸಂಸ್ಕರಣೆ ನಂತರ ಇನ್ನಷ್ಟು ಫಿಲ್ಟರ್ ಮಾಡಿ ಕುಡಿಯುವ ನೀರಿಗೆ ಬಳಸಲಾಗುತ್ತಿದೆ. ಆ ನೀರು ಹರಿಯುವ ನದಿಯಷ್ಟು ಶುದ್ಧವಾಗಿದೆ. ನಮೀಬಿಯಾದಲ್ಲೂ ಇದೇ ರೀತಿ ಬಳಸಲಾಗುತ್ತಿದೆ. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಇನ್ನಷ್ಟು ಶುದ್ಧ ಮಾಡುವ ಅವಕಾಶ ಸರ್ಕಾರಕ್ಕಿದೆ. ಆ ಬದ್ಧತೆ ಹಾಗೂ ಜವಾಬ್ದಾರಿ ಸರ್ಕಾರಕ್ಕೆ ಇರಬೇಕು’ ಎಂದರು.

‘ಈ ವಿಷಯದಲ್ಲಿ ಬಿಜೆಪಿ ಹೋರಾಟ ಮಾಡಲಿದೆ. ಆದರೆ, ಇದಕ್ಕಾಗಿ ಬಂದ್ ಮಾಡುವುದು ಸರಿಯಲ್ಲ. ವಿದ್ಯಾರ್ಥಿಗಳ ಪರೀಕ್ಷೆ ನಡೆಯುತ್ತಿದೆ. ಬೀದಿ ಬದಿ ವ್ಯಾಪಾರಿಗಳು ಕೆಲಸ ಮಾಡುತ್ತಿದ್ದಾರೆ. ಬಂದ್ ಮಾಡಿದರೆ ಇವರೆಲ್ಲರಿಗೂ ಸಮಸ್ಯೆ ಹೆಚ್ಚಾಗುತ್ತದೆ. ಜನರಿಗೆ ಕಷ್ಟ ಕೊಡದೆ, ಯಾರಿಗೂ ನಷ್ಟ ಉಂಟುಮಾಡದೆ ಹೋರಾಟ ಮಾಡಬೇಕಿದೆ. ಬಂದ್ ಮಾಡಲು ಬಿಜೆಪಿ ಅಥವಾ ನಾನು ಬೆಂಬಲ ಕೊಡುವುದಿಲ್ಲ. ಬಯಲುಸೀಮೆಯ ಮೂರು ಜಿಲ್ಲೆಗಳಲ್ಲಿ ನಾನು ಪಾದಯಾತ್ರೆ ಮಾಡಿ, ಹಳ್ಳಿಗಳಿಗೆ ಭೇಟಿ ನೀಡಿ ಅರಿವು ಮೂಡಿಸುವ ಕೆಲಸ ಮಾಡುತ್ತೇನೆ’ ಎಂದರು.

‘2013ರಲ್ಲಿ ನಾನು ಮೊದಲ ಬಾರಿಗೆ ಶಾಸಕನಾದಾಗ ಅಂತರ್ಜಲ ಮಟ್ಟ 1,000ದಿಂದ 1,500 ಅಡಿಗೆ ಕುಸಿದಿತ್ತು. ರೈತರು ಪಂಪ್ ತಂದು ಅಳವಡಿಸುವ ಸಮಯಕ್ಕೆ ನೀರು ಬತ್ತಿ ಹೋಗಿರುತ್ತಿತ್ತು. ನೀರಾವರಿಯ ಸಮಸ್ಯೆಯಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ಹಿರಿಯ ಅಧಿಕಾರಿಯೊಬ್ಬರು ಎರಡು ಹಂತಗಳಲ್ಲಿ ನೀರು ಶುದ್ಧೀಕರಿಸಿ ನೀಡಬಹುದೆಂದು ಸಲಹೆ ನೀಡಿದ್ದರು. ಅದಕ್ಕಾಗಿ ಎಚ್.ಎನ್ ವ್ಯಾಲಿ ಹಾಗೂ ಕೆ.ಸಿ ವ್ಯಾಲಿ ಯೋಜನೆಯಿಂದ ನೀರು ತರುವ ಕ್ರಮ ಜಾರಿ ಮಾಡಲಾಯಿತು. ಚಿಕ್ಕಬಳ್ಳಾಪುರಕ್ಕೆ ಕಾವೇರಿಯಿಂದ ಅಥವಾ ಕೃಷ್ಣಾ ಅಥವಾ ಯಾವುದೇ ನದಿಯಿಂದ ನೀರು ದೊರೆಯುವುದಿಲ್ಲ. ಬಯಲುಸೀಮೆಗೆ ಯಾವುದೇ ನದಿ ಮೂಲಗಳಿಲ್ಲ’ ಎಂದರು.

ಎತ್ತಿನಹೊಳೆ ಯೋಜನೆಗೆ ಹಣ ಒದಗಿಸಿ

ಎರಡು ವರ್ಷದಲ್ಲಿ ಎತ್ತಿನಹೊಳೆ ಯೋಜನೆ ತರುತ್ತೇವೆ ಎಂದು ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. 2014ರಲ್ಲಿ ಲೋಕಸಭಾ ಚುನಾವಣೆಯ ವೇಳೆ ಕಾಮಗಾರಿಗೆ ಕಾಂಗ್ರೆಸ್ ಸರ್ಕಾರ ಚಾಲನೆ ನೀಡಿತ್ತು. 12 ವರ್ಷ ಕಳೆದರೂ ಕಾಮಗಾರಿ ಮುಗಿದಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗಲೇ ಈ ಯೋಜನೆ ರೂಪಿಸಲಾಗಿತ್ತು. ಯೋಜನೆಯ ಮೊತ್ತ ಈಗ ₹30 ಸಾವಿರ ಕೋಟಿಗೆ ತಲುಪಿದೆ’ ಎಂದರು.

‘ಎತ್ತಿನಹೊಳೆಯಿಂದ ನೀರು ಬಂದಿದ್ದರೆ ಎಚ್.ಎನ್ ವ್ಯಾಲಿ, ಕೆ.ಸಿ ವ್ಯಾಲಿಯ ನೀರನ್ನು ಯಾರೂ ಬಳಸುತ್ತಿರಲಿಲ್ಲ. ಕೋವಿಡ್ ಇದ್ದಾಗಲೂ ಬಿಜೆಪಿ ಈ ಯೋಜನೆಗೆ ಹೆಚ್ಚು ಅನುದಾನ ನೀಡಿದೆ. ಕಾಂಗ್ರೆಸ್ ಸರ್ಕಾರ ಸರಿಯಾದ ಅನುದಾನ ಒದಗಿಸಿಲ್ಲ. ಕಾಂಗ್ರೆಸ್ ಸರ್ಕಾರ ಅತಿ ಶೀಘ್ರದಲ್ಲಿ ಕಾಮಗಾರಿ ಮುಗಿಸಿ ರೈತರ ಋಣ ತೀರಿಸಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.