ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಅರ್ಜಿ ಸಲ್ಲಿಸುವ ದಿನಾಂಕವನ್ನು ಫೆ.22ರವರೆಗೆ ವಿಸ್ತರಿಸಲಾಗಿದೆ.

ಇದುವರೆಗೂ 2.9 ಲಕ್ಷ ವಿದ್ಯಾರ್ಥಿಗಳು ಆಧಾರ್ ಸಂಖ್ಯೆ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ. 2.5 ಲಕ್ಷ ಅಭ್ಯರ್ಥಿಗಳು ಶುಲ್ಕ ಪಾವತಿಸಿದ್ದಾರೆ. ಅರ್ಜಿ ಸಲ್ಲಿಕೆಗೆ ಫೆ.17 ಕೊನೆಯ ದಿನಾಂಕವಾಗಿತ್ತು. ಮತ್ತೆ ಐದು ದಿನಗಳು ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಫೆ.24 ಕೊನೆಯ ದಿನ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಹೇಳಿದ್ದಾರೆ.

ಎಸ್ಎಟಿಎಸ್ ಮೂಲಕ 1.8 ಲಕ್ಷ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಆನ್ಲೈನ್ ಮೂಲಕ, ಕಾಲೇಜು ಹಂತದಲ್ಲಿ 35 ಸಾವಿರ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ. ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳಲ್ಲಿ ಇರುವ ಲೋಪ, ತಪ್ಪುಗಳನ್ನು ಸರಿಪಡಿಸಿಕೊಳ್ಳಬಹುದು ಎಂದು ಸಲಹೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.