ಬೆಂಗಳೂರು: ಎಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ ಸೇರಿದಂತೆ ವಿವಿಧ ವೃತ್ತಿ ಕೋರ್ಸ್ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಯ್ಕೆಗಳನ್ನು (ಆಪ್ಷನ್ಸ್) ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಜುಲೈ 15ರವರೆಗೆ ಅವಕಾಶ ನೀಡಿದೆ.

ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ ಮತ್ತು ಯುನಾನಿ, ಬಿ.ಎಸ್ಸಿ ನರ್ಸಿಂಗ್, ವಾಸ್ತುಶಿಲ್ಪ ಶಾಸ್ತ್ರ, ಯೋಗ ಮತ್ತು ನ್ಯಾಚುರೋಪತಿ ಕೋರ್ಸ್ಗಳ ಸೀಟು ಲಭ್ಯತೆಯ ಪಟ್ಟಿ (ಸೀಟ್ ಮ್ಯಾಟ್ರಿಕ್ಸ್) ತಡವಾಗಿದ್ದು, ಪಟ್ಟಿ ದೊರೆತ ನಂತರ ಆ ಕೋರ್ಸ್ಗಳ ಸೀಟು ಹಂಚಿಕೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.

ಅಣಕು ಫಲಿತಾಂಶವನ್ನು ಜುಲೈ 19ರಂದು ಪ್ರಕಟಿಸಲಾಗುವುದು. ಆದ್ಯತೆಗಳನ್ನು ಅದಲು- ಬದಲು ಮಾಡಿಕೊಳ್ಳಲು ಜುಲೈ 22ರವರೆಗೆ ಅವಕಾಶ ಇರುತ್ತದೆ. ಜುಲೈ 25ರಂದು ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಅಭ್ಯರ್ಥಿಗಳು ಸೀಟು ಲಭ್ಯತೆ ಪಟ್ಟಿ ನೋಡಿಕೊಂಡು ಆಯ್ಕೆಗಳನ್ನು ದಾಖಲಿಸುವಾಗ ಆದ್ಯತಾ ಕ್ರಮಗಳನ್ನು ಅನುಸರಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಿಇಟಿ-25ರ ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಪಾಲಿಸಬೇಕು. ಕೆಇಎ ವಿಕಸನ ಯೂಟ್ಯೂಬ್ ಚಾನಲ್ನಲ್ಲಿ ಇರುವ ವಿಡಿಯೊ ನೋಡಬಹುದು ಎಂದು ಸಲಹೆ ನೀಡಿದ್ದಾರೆ.

ರಾಷ್ಟ್ರೀಯ ವೈದ್ಯಕೀಯ ಮಂಡಳಿ ಮತ್ತು ವೈದ್ಯಕೀಯ ಕೌನ್ಸೆಲಿಂಗ್, ವೈದ್ಯಕೀಯ ಶಿಕ್ಷಣ ಇಲಾಖೆ ಹೊರಡಿಸುವ ಸೂಚನೆಗಳ ಪ್ರಕಾರ ವೈದ್ಯಕೀಯ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.