ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನ್ನ ಪುತ್ರ ಕಾಂತೇಶ ಹಾವೇರಿ ಲೋಕಸಭೆ ಬಿಜೆಪಿ ಟಿಕೆಟ್ ಆಕಾಂಕ್ಷಿ: ಕೆ.ಎಸ್. ಈಶ್ವರಪ್ಪ

ಹಾವೇರಿಯಲ್ಲಿ ಹೇಳಿಕೆ
Published 25 ಜೂನ್ 2023, 5:17 IST
Last Updated 25 ಜೂನ್ 2023, 5:17 IST
ಅಕ್ಷರ ಗಾತ್ರ

ಹಾವೇರಿ: ‘ನನ್ನ ಪುತ್ರ ಕಾಂತೇಶ ಅವರು ಹಾವೇರಿಯಿಂದ ಲೋಕಸಭೆಗೆ ಬಿಜೆಪಿಯಿಂದ ಸ್ಪರ್ಧಿಸಲು ಅಪೇಕ್ಷೆ ಪಟ್ಟಿರುವುದು ನಿಜ. ಹಾಲಿ ಸಂಸದ ಶಿವಕುಮಾರ್ ಉದಾಸಿ ಚುನಾವಣೆಗೆ ನಿಲ್ಲುವುದಿಲ್ಲ ಅಂತ ಹೇಳಿದ್ದಾರೆ. ಟಿಕೆಟ್‌ ನೀಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ’ ಎಂದು ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂತೇಶ ಹಾವೇರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕು ಎನ್ನುತ್ತಿದ್ದಾನೆ. ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿಲ್ಲ. ಆರ್ಥಿಕವಾಗಿ ಸರ್ಕಾರ ದಿವಾಳಿಯಾಗಿದೆ. ಐದು ಗ್ಯಾರಂಟಿ ಯೋಜನೆಗಳಿಗೆ ಎಲ್ಲಿಂದ ಹಣ ಜೋಡಿಸುತ್ತಾರೆ ಎಂಬುದನ್ನು ಬಹಿರಂಗಪಡಿಸಬೇಕು. ಈ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು. 

ನೂತನ ಶಾಸಕರಿಗೆ ರವಿಶಂಕರ ಗುರೂಜಿ ಮತ್ತು ಗುರುರಾಜ ಕರಜಗಿ ಅವರಿಂದ ತರಬೇತಿ ನೀಡುವ ಬಗ್ಗೆ ವಿರೋಧ ವ್ಯಕ್ತವಾಗುತ್ತಿದೆಯಲ್ಲ ಎಂಬ ಪ್ರಶ್ನೆಗೆ, ಕಾಂಗ್ರೆಸ್‌ನವರು ಮುಸ್ಲಿಮರನ್ನು ಸಂತೃಪ್ತಿಗೊಳಿಸುವುದಕ್ಕಾಗಿ ಹಿಂದೂ ಧರ್ಮ ಮತ್ತು ಸಂಸ್ಕೃತಿ ಪ್ರತಿಪಾದಕರನ್ನು ವಿರೋಧಿಸುತ್ತಾರೆ. ಮುಸ್ಲಿಂ ರಾಷ್ಟ್ರಗಳಲ್ಲಿ ಮಾನವೀಯತೆಯ ಬೋಧನೆ ಮಾಡಿದ ರವಿಶಂಕರ್‌ ಗುರೂಜಿ ಹಾಗೂ ಶಿಕ್ಷಣ ತಜ್ಞ ಗುರುರಾಜ ಕರಜಗಿ ಅವರನ್ನು ವಿರೋಧಿಸಿದ್ದು ಸರಿಯಲ್ಲ‌’ ಎಂದರು. 

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕರಾದ ಶಿವರಾಜ ಸಜ್ಜನರ, ವಿರೂಪಾಕ್ಷಪ್ಪ ಬಳ್ಳಾರಿ, ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ, ಗವಿಸಿದ್ದಪ್ಪ ದ್ಯಾಮಣ್ಣವರ, ಬೋಜರಾಜ ಕರೂದಿ, ಪಾಲಾಕ್ಷಗೌಡ ಪಾಟೀಲ, ಪ್ರಭು ಹಿಟ್ನಳ್ಳಿ, ಕಿರಣ್‌ ಕೋಣನವರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT