ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

KEA: 684 ಹುದ್ದೆಗಳ ಅಂತಿಮ ಅಂಕ ಪಟ್ಟಿ ಪ್ರಕಟ

Published 20 ಜೂನ್ 2024, 16:05 IST
Last Updated 20 ಜೂನ್ 2024, 16:05 IST
ಅಕ್ಷರ ಗಾತ್ರ

ಬೆಂಗಳೂರು: ವಿವಿಧ ನಿಗಮ, ಮಂಡಳಿಗಳ 684 ಹುದ್ದೆಗಳನ್ನು ತುಂಬಲು 2023ರ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಸಿದ್ದ ಪರೀಕ್ಷೆಗಳ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

‘ಸ್ವೀಕೃತ ಆಕ್ಷೇಪಗಳನ್ನು ಪರಿಶೀಲಿಸಿದ ನಂತರ ಅಂತಿಮ ಅಂಕಪಟ್ಟಿ ಪ್ರಕಟಿಸಲಾಗಿದೆ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

‘ಒಟ್ಟು 6,18,148 ಅಭ್ಯರ್ಥಿಗಳ ಅಂತಿಮ ಅಂಕ ಪಟ್ಟಿಯನ್ನು ಸಂಬಂಧಪಟ್ಟ ಇಲಾಖೆ, ಸಂಸ್ಥೆಗಳಿಗೆ ಹಸ್ತಾಂತರಿಸಲಾಗುವುದು. ನಂತರ ಸಂಬಂಧಪಟ್ಟ ಇಲಾಖೆ, ಸಂಸ್ಥೆಗಳು ನಿಯಮಾನುಸಾರ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಮುಂದಿನ ಕ್ರಮವಹಿಸಲಿವೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಆಹಾರ ನಿಗಮ (386 ಹುದ್ದೆ), ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ಹುದ್ದೆಗಳಿಗೆ ಪರೀಕ್ಷೆ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT