ಬೆಂಗಳೂರು: ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಬಯಸುವ ಅಭ್ಯರ್ಥಿಗಳಿಂದ ವೈಯಕ್ತಿಕ ಮಾಹಿತಿ ಸಂಗ್ರಹಿಸುತ್ತಿದ್ದ ಆರೋಪದ ಮೇಲೆ ನಕಲಿ ವೆಬ್ಸೈಟ್ www-kcet.org ವಿರುದ್ಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೈಬರ್ ಅಪರಾಧ ಠಾಣೆಗೆ ದೂರು ನೀಡಿದೆ.

ಕೆಇಎ ಹೆಸರಿನಲ್ಲಿ, ಪ್ರಾಧಿಕಾರದ ಲೋಗೊ ಸಹ ಬಳಸಿಕೊಂಡು ಅಭ್ಯರ್ಥಿಗಳಿಂದ ಶೈಕ್ಷಣಿಕ ವಿವರ, ಇಂಟರ್ನೆಟ್ ಪ್ರೊಟೊಕಾಲ್ (ಐಪಿ) ವಿಳಾಸಗಳು ಸೇರಿದಂತೆ ಮಾಹಿತಿ ಸಂಗ್ರಹಿಸಿ, ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ‘ಮೆಡಿಕಲ್ ಎಕ್ಸೊ’ ಆಯೋಜಿಸಲಾಗಿದೆ. ವೈದ್ಯಕೀಯ ಸೀಟು ಪಡೆಯಲು ಸೂಕ್ತ ಮಾರ್ಗದರ್ಶನ ನೀಡಲಾಗುತ್ತದೆ ಎಂದು ಕೆಲ ಅಭ್ಯರ್ಥಿಗಳಿಂದ ತಲಾ ₹30 ಸಾವಿರ ವಸೂಲಿ ಮಾಡಲಾಗಿದೆ ಎಂದು ಕೆಇಎ ಅಧಿಕಾರಿಗಳು ದೂರಿನಲ್ಲಿ ವಿವರಿಸಿದ್ದಾರೆ.

ನಕಲಿ ವೆಬ್ಸೈಟ್ ವಂಚನೆ ವಿಷಯ ತಿಳಿದ ನಂತರ ಕೆಇಎ ಸಿಬ್ಬಂದಿ ತಾವೇ ವಿದ್ಯಾರ್ಥಿಗಳಂತೆ ನಟಿಸಿ, ವಂಚನೆಯ ಮತ್ತಷ್ಟು ಮಾಹಿತಿ ಸಂಗ್ರಹಿಸಿದ್ದಾರೆ. ನಂತರ ಪೊಲೀಸರಿಗೆ ದೂರು ನೀಡಿದ್ದಾರೆ.

‘ವೈದ್ಯಕೀಯ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳನ್ನೂ ‘ಮೆಡಿಕಲ್ ಎಕ್ಸೊ’ಗೆ ಆಹ್ವಾನಿಸಿರುವುದಾಗಿ ಅಭ್ಯರ್ಥಿಗಳನ್ನು ವಂಚಕರು ನಂಬಿಸಿದ್ದಾರೆ. ತಮ್ಮನ್ನು ವೈದ್ಯಕೀಯ ಮಾರ್ಗದರ್ಶಕರು ಎಂದು ಗುರುತಿಸಿಕೊಂಡಿದ್ದಾರೆ. ಸುಮಾರು 1,000 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ವೈದ್ಯಕೀಯ ಸೀಟ್ಬ್ಲಾಕಿಂಗ್ ಮಾಫಿಯಾ ಇಂತಹ ವಂಚನೆಯಲ್ಲಿ ಭಾಗಿಯಾಗಿರಬಹುದು’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಶಂಕಿಸಿದ್ದಾರೆ.

ವಿದ್ಯಾರ್ಥಿಗಳು ಮತ್ತು ಪೋಷಕರು ಕೆಇಎ ವೆಬ್ಸೈಟ್ಗೆ ಭೇಟಿ ನೀಡಿದಾಗ ಈ ನಕಲಿ ವೆಬ್ಸೈಟ್ ಸ್ವಯಂಚಾಲಿತವಾಗಿ ತೆರೆದುಕೊಳ್ಳುತ್ತಿದ್ದು, ಲಿಂಕ್ ಕ್ಲಿಕ್ ಮಾಡಿದ ತಕ್ಷಣ ಅರ್ಜಿ ಸಂಖ್ಯೆ, ಕೋರ್ಸ್, ಮೊಬೈಲ್ ಸಂಖ್ಯೆ ಮತ್ತು ಇತರ ಮಾಹಿತಿ ದಾಖಲಿಸಲು ಕೇಳುತ್ತಿದೆ. ಇಂತಹ ನಕಲಿ ವೆಬ್ಸೈಟ್ಗಳ ಕುರಿತು ಜಾಗೃತಿ ವಹಿಸಬೇಕು. ಕೆಇಎ ಸಹಾಯವಾಣಿಗೆ ಕರೆ ಮಾಡಿ ವಿಚಾರಿಸಬೇಕು ಎಂದು ಕೆಇಎ ಸಲಹೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.