ಬೆಂಗಳೂರು: ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅ.28 ಮತ್ತು 29ರಂದು ಪರೀಕ್ಷೆ ನಡೆಸುತ್ತಿದ್ದು, 5.35 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.
28ರಂದು ನಡೆಯುವ ಪರೀಕ್ಷೆಯಲ್ಲಿ ಬೆಂಗಳೂರಿನ 72 ಕೇಂದ್ರಗಳು ಸೇರಿದಂತೆ ರಾಜ್ಯದ 350 ಕೇಂದ್ರಗಳಲ್ಲಿ 1.75 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುವರು. 29 ರಂದು 870 ಕೇಂದ್ರಗಳಲ್ಲಿ 3.60 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಮಾಹಿತಿ ನೀಡಿದ್ದಾರೆ.
ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಷ್ಟೇ ಸಂಖ್ಯೆಯ ಪ್ರವೇಶ ಪತ್ರಗಳು ಡೌನ್‌ಲೋಡ್ ಆಗಿವೆ. ಕೆಲವರಿಗೆ ಎರಡು ಪ್ರತ್ಯೇಕ ಜಿಲ್ಲೆಗಳಲ್ಲಿ, ಅದೇ ಜಿಲ್ಲೆಯ ಬೇರೆಬೇರೆ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳು ದೊರಕಿವೆ. ಅಂಥವರು ತಮಗೆ ಅನುಕೂಲವಾಗುವ ಕಡೆ ಪರೀಕ್ಷೆ ಬರೆಯಬಹುದು. ಆದರೆ, ಪರೀಕ್ಷಾ ದಿನದಂದು ಎರಡೂ ಪ್ರವೇಶ ಪತ್ರಗಳನ್ನೂ ಕೊಠಡಿಯ ಮೇಲ್ವಿಚಾರಕರಿಗೆ ಸಲ್ಲಿಸಬೇಕು ಎಂದು ಅವರು ವಿವರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.