ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ 5.75 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ರಾಜ್ಯದ 1,410 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 150 ಅಂಕಗಳ ಕನ್ನಡ ಕಡ್ಡಾಯ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದವರು ಮಾತ್ರ ಅ.27ರಂದು ನಡೆಯುವ ಮುಖ್ಯ ಪರೀಕ್ಷೆಗೆ ಅರ್ಹರಾಗುತ್ತಾರೆ. ಈ ಪರೀಕ್ಷೆಗೆ ಗೈರಾದವರು ಮುಖ್ಯಪರೀಕ್ಷೆಗೆ ಹಾಜರಾಗುವಂತಿಲ್ಲ ಎಂದು ಕೆಇಎ ಹೇಳಿದೆ.