ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕಿ ಸ್ಥಾನದಿಂದ ಎಸ್. ರಮ್ಯಾ ಅವರನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಎಚ್. ಪ್ರಸನ್ನ ಅವರಿಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಸ್ಥಾನದ ಹೆಚ್ಚುವರಿ ಹೊಣೆ ನೀಡಲಾಗಿದೆ. ಈ ಹುದ್ದೆಯನ್ನು ರಮ್ಯಾ ಅವರೂ ಹೆಚ್ಚುವರಿಯಾಗಿ ನಿರ್ವಹಿಸುತ್ತಿದ್ದರು.

ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಕಳೆದ ತಿಂಗಳು ನಡೆಸಿದ್ದ ಸಿಇಟಿಯಲ್ಲಿ ಪಠ್ಯ ಹೊರತಾದ ಪ್ರಶ್ನೆಗಳು ಕಾಣಿಸಿಕೊಂಡಿದ್ದ ಪ್ರಕರಣದಲ್ಲಿ ಅವರು ಸಾಕಷ್ಟು ಟೀಕೆಗೆ ಒಳಗಾಗಿದ್ದರು.

ಉಡುಪಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಎಚ್.ಪ್ರಸನ್ನ ಅವರನ್ನು ಇದೇ ವರ್ಷದ ಜನವರಿಯಲ್ಲಿ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿತ್ತು. ಎರಡು ದಿನಗಳಲ್ಲೇ ಅವರನ್ನು ಮತ್ತೆ ವರ್ಗಾವಣೆ ಮಾಡಿ, ರಮ್ಯಾ ಅವರನ್ನೇ ಮುಂದುವರಿಸಲಾಗಿತ್ತು.
.ಸಿಇಟಿ: ಪಠ್ಯ ಹೊರತಾದ ಪ್ರಶ್ನೆ, ತ್ವರಿತ ನಿರ್ಧಾರಕ್ಕೆ ಒತ್ತಾಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.