ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಇಎ ಅಕ್ರಮ: ಆರ್.ಡಿ.ಪಾಟೀಲನನ್ನು ಬಿಡುವ ಪ್ರಶ್ನೆಯೇ ಇಲ್ಲ- ಸಚಿವ ಪರಮೇಶ್ವರ

Published : 9 ನವೆಂಬರ್ 2023, 15:32 IST
Last Updated : 9 ನವೆಂಬರ್ 2023, 15:32 IST
ಫಾಲೋ ಮಾಡಿ
Comments

ಬೆಂಗಳೂರು: ‘ಕೆಇಎ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲನನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ. ಬಿಜೆಪಿಯವರಿಗೆ ಕಾಮಾಲೆ ಕಣ್ಣು ಇರುವುದರಿಂದ, ಅವರಿಗೆ ಕಾಣುವುದೆಲ್ಲ ಹಳದಿಯೇ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಕಿಡಿಕಾರಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಆರ್‌.ಡಿ. ಪಾಟೀಲ ನಾಪತ್ತೆ ಪ್ರಕರಣದಲ್ಲಿ ಪೊಲೀಸರ ತಪ್ಪಿದ್ದರೆ, ಪೊಲೀಸರ ವಿರುದ್ದವೂ ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ ಇಬ್ಬರು ಪೊಲೀಸರ ವಿರುದ್ದ ಶಿಸ್ತುಕ್ರಮ ತೆಗೆದುಕೊಂಡಿದ್ದೇವೆ’ ಎಂದರು.

‘ಈ ಪ್ರಕರಣದಲ್ಲಿ ಬಿಜೆಪಿಯವರು ವಿನಾ ಕಾರಣ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಆರೋಪ ಮಾಡುತ್ತಿದ್ದಾರೆ’ ಎಂದರು.

ಜಾತಿಗಣತಿ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ, ‘ನೂರಾರು ಕೋಟಿ ಖರ್ಚು ಮಾಡಿ ಜಾತಿಗಣತಿ ಮಾಡಿಸಲಾಗಿದೆ. ಆ ವರದಿಯಲ್ಲಿ ಏನಿದೆ ಎಂದು ಗೊತ್ತಾಗಬೇಕಲ್ಲವೇ?’ ಎಂದರು.

ಒಳ ಮೀಸಲಾತಿ ಕುರಿತು ಪ್ರತಿಕ್ರಿಯಿಸಿದ ಅವರು, ‘ಸದಾಶಿವ ಆಯೋಗದ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದಲ್ಲಿ ನಡೆದ ಐಕ್ಯತಾ ಸಮಾವೇಶದಲ್ಲಿಯೇ ನಾವು ಘೋಷಣೆ ಮಾಡಿದ್ದೇವೆ. ಘೋಷಣೆ ಮಾಡಿದಂತೆ ನಾವು ನಡೆದುಕೊಳ್ಳಬೇಕಲ್ಲವೇ? ನಾನು ಅದರ ಪರವಾಗಿದ್ದೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT