ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಯೊನಿಕ್ಸ್‌ 684 ಹುದ್ದೆಗಳ ನೇಮಕಾತಿ: ಪರಿಷ್ಕೃತ ಅಂಕ ಪ್ರಕಟ

Published 7 ಜೂನ್ 2024, 16:09 IST
Last Updated 7 ಜೂನ್ 2024, 16:09 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೊನಿಕ್ಸ್‌) ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆಸಿದ್ದ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ.

ಆರು ನಿಗಮ- ಮಂಡಳಿಗಳ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ಅಂಕಗಳನ್ನು ಪಟ್ಟಿ ಒಳಗೊಂಡಿದೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 684 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು.

ಪರಿಷ್ಕೃತ ಅಂಕ ಪಟ್ಟಿಗೆ ಆಕ್ಷೇಪಣೆಗಳನ್ನು ಜೂನ್ 14ರ ಒಳಗೆ ಇ-ಮೇಲ್ (kea2023exam@gmail.com) ಮೂಲಕ ಸಲ್ಲಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT