ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಇಎ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹತಾ ಪಟ್ಟಿ ಪ್ರಕಟ

Published 4 ಆಗಸ್ಟ್ 2024, 7:20 IST
Last Updated 4 ಆಗಸ್ಟ್ 2024, 7:20 IST
ಅಕ್ಷರ ಗಾತ್ರ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಯುನಾನಿ ಮತ್ತು ಹೋಮಿಯೋಪಥಿ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹತೆ ಪಡೆದು, ರಾಜ್ಯದವರೆಂದು ಕ್ಲೇಮ್ ಮಾಡಿರುವ 92,858 ಮಂದಿಯ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತನ್ನ ವೆಬ್ ಸೈಟ್‌ನಲ್ಲಿ ಪ್ರಕಟಿಸಿದೆ.

ಪಟ್ಟಿಯಲ್ಲಿ ಅತಿ ಹೆಚ್ಚು ಅಂಕ (716 ಅಂಕ) ಪಡೆದ ಪದ್ಮನಾಭ ಮೆನನ್ ಮೊದಲ ಸ್ಥಾನದಲ್ಲಿ ಇದ್ದಾರೆ. ಅತಿ ಕಡಿಮೆ ಅಂದರೆ 127 ಅಂಕ ಪಡೆದವರು ಕೂಡ ಈ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹತೆ‌ ಪಡೆದಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ವೈದ್ಯಕೀಯ ಕೋರ್ಸ್‌ಗೆ ಅರ್ಹತೆ ಪಡೆದು ಇನ್ನೂ ಅರ್ಜಿ ಸಲ್ಲಿಸದೇ ಇರುವವರಿಗೆ ಒಂದೆರಡು ದಿನದಲ್ಲಿ ಹೊಸದಾಗಿ ನೋಂದಣಿ ಮಾಡಿಕೊಳ್ಳಲು ಲಿಂಕ್ ಬಿಡುಗಡೆ ಮಾಡಲಾಗುವುದು. ನಂತರ ನೀಟ್ ಅಂಕ ದಾಖಲಿಸಲು ಎಲ್ಲ ಅರ್ಹರಿಗೂ ಅವಕಾಶ ನೀಡಲಾಗುವುದು ಎಂದೂ ಅವರು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT