ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

Published 25 ಆಗಸ್ಟ್ 2024, 15:31 IST
Last Updated 25 ಆಗಸ್ಟ್ 2024, 15:31 IST
ಅಕ್ಷರ ಗಾತ್ರ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್‌ಗಳ ಪ್ರವೇಶದ ಮೊದಲ ಸುತ್ತಿನ ಅಣಕು ಸೀಟು‌ ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಆ. 27ರ ಬೆಳಿಗ್ಗೆ 11ರವರೆಗೆ ಅಭ್ಯರ್ಥಿಗಳು ಕಾಲೇಜು, ಕೋರ್ಸ್‌ಗಳನ್ನು ಬದಲಿಸಿಕೊಳ್ಳಬಹುದು. ನಿಗದಿಯಂತೆ ಮೊ‌ದಲ ಸುತ್ತಿನ‌ ನೈಜ ಸೀಟು ಹಂಚಿಕೆ ಫಲಿತಾಂಶವನ್ನು ಸೆ. 1ರಂದು ಪ್ರಕಟಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.

ವಾಸ್ತುಶಿಲ್ಪಶಾಸ್ತ್ರ, ಯೋಗ ಮತ್ತು ನ್ಯಾಚುರೋಪಥಿ, ಕೃಷಿ ವಿಜ್ಞಾನ, ವೆಟರಿನರಿ, ಬಿಎಸ್‌ಸಿ (ನರ್ಸಿಂಗ್), ಬಿ-ಫಾರ್ಮ, ಫಾರ್ಮ್-ಡಿ, ಎಂಜಿನಿಯರಿಂಗ್‌ ಸೇರಿದಂತೆ ಎಲ್ಲ ಕೋರ್ಸುಗಳ ಸೀಟು ಹಂಚಿಕೆ ಮಾಡಲಾಗಿದೆ. ಆಯ್ಕೆಗಳನ್ನು ದಾಖಲಿಸದೇ ಇರುವ ಅರ್ಹ ಅಭ್ಯರ್ಥಿಗಳು ಆ.27ರ ಬೆಳಿಗ್ಗೆ 11ರೊಳಗೆ ಮೊದಲನೆ ಸುತ್ತಿನ ಸೀಟು ಹಂಚಿಕೆಗೆ ಕಾಲೇಜು ಮತ್ತು ಕೋರ್ಸುಗಳ ಆಯ್ಕೆಗಾಗಿ ಆದ್ಯತಾ ಕ್ರಮದಲ್ಲಿ ದಾಖಲಿಸಬಹುದು. ಮಾಹಿತಿಗೆ http://kea.kar.nic.in ಸಂಪರ್ಕಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT