ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ.

2,405 ಸೀಟುಗಳನ್ನು ಹಂಚಿಕೆ ಮಾಡಲಾಗಿದೆ. ಸೀಟು ಹಂಚಿಕೆಯಾದವರು ಡಿ.26ರ ಒಳಗೆ ಶುಲ್ಕ ಪಾವತಿಸಿ, ಡಿ. 27ರ ಒಳಗೆ ಕಾಲೇಜುಗಳಿಗೆ ಪ್ರವೇಶ ಪಡೆಯಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.

ಸೀಟು ಹಂಚಿಕೆಯಾದವರು ಕಡ್ಡಾಯವಾಗಿ ಪ್ರವೇಶ ಪಡೆಯಬೇಕು. ಒಂದು ವೇಳೆ ಸಿಕ್ಕಿರುವ ಸೀಟು ಇಷ್ಟವಿಲ್ಲದಿದ್ದರೆ ₹1.5 ಲಕ್ಷ ದಂಡ ಕಟ್ಟಿ ಮೂಲ ದಾಖಲೆ ವಾಪಸ್ ಪಡೆಯಬಹುದು. ಒಟ್ಟು 4,651 ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಸ್ವೀಕರಿಸಿದ್ದು, ಎಲ್ಲ ಅಭ್ಯರ್ಥಿಗಳನ್ನೂ ಎರಡು ಸುತ್ತುಗಳ ಸೀಟು ಹಂಚಿಕೆಗೆ ಪರಿಗಣಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.