ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳಿಗೆ (ಎಂ.ಡಿ, ಎಂ.ಎಸ್) ನೋಂದಣಿ ಮಾಡಲು ಅರ್ಹ ಸೇವಾ ನಿರತ ಅಭ್ಯರ್ಥಿಗಳಿಗೆ ಪೋರ್ಟಲ್ ತೆರೆಯಲಾಗಿದ್ದು, ಆನ್ಲೈನ್ ಮೂಲಕ ನೋಂದಾಯಿಸಿಕೊಂಡು ನ.16ರ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೇಳಿದೆ.

ಪಿಜಿನೀಟ್-2025ರಲ್ಲಿ ನಿಗದಿಪಡಿಸಿರುವ ಕನಿಷ್ಠ ಪರ್ಸೆಂಟೈಲ್ ಅಂಕಗಳನ್ನು ಅಥವಾ ಅದಕ್ಕಿಂತ ಹೆಚ್ಚು ಪರ್ಸೆಂಟೈಲ್ ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳು ಮಾತ್ರ ನೋಂದಣಿ ಮಾಡಿಕೊಳ್ಳಲು ಅರ್ಹರಿರುತ್ತಾರೆ. ನೊಂದಣಿ ಶುಲ್ಕ, ದಾಖಲಾತಿ ಪರಿಶೀಲನೆಯ ವಿವರಗಳು, ದಾಖಲಾತಿ ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲಾತಿಗಳು, ಇತರ ವಿವರಗಳನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ದಾಖಲೆಗಳ ಪರಿಶೀಲನೆಗೆ ನ.17ರಂದು (ಬೆ.11ರಿಂದ ಮ.2) ಕೆಇಎ ಕಚೇರಿಗೆ ಮೂಲ ದಾಖಲೆಗಳೊಂದಿಗೆ ಹಾಜರಾಗಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.

ಪಿಜಿಸಿಇಟಿ: ಎಂ.ಬಿ.ಎ, ಎಂ.ಸಿ.ಎ, ಎಂ.ಇ, ಎಂ.ಟೆಕ್ ಮತ್ತು ಎಂ.ಆರ್ಕ್ ಕೋರ್ಸ್ಗಳ ಪ್ರವೇಶಕ್ಕೆ ಮೂರನೇ ಹಾಗೂ ಅಂತಿಮ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿ ಹಾಗೂ ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಿಕೊಳ್ಳಲು ನ.15ರಂದು ಮಧ್ಯಾಹ್ನ 3 ಗಂಟೆವರೆಗೆ ವಿಸ್ತರಿಸಲಾಗಿದೆ. ಅದೇ ದಿನ ಸಂಜೆ 5.30ರೊಳಗೆ ಕಾಲೇಜಿಗೆ ಪ್ರವೇಶ ಪಡೆಯಬೇಕು ಎಂದು ಪ್ರಸನ್ನ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.