ಬೆಂಗಳೂರು ಉತ್ತರ, ಬಳ್ಳಾರಿ, ದಾವಣಗೆರೆ, ಧಾರವಾಡ, ಕಲಬುರಗಿ ಮತ್ತು ಮೈಸೂರು ನಗರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, 14,131 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಸುಗಮ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.