ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಇಎ: ಸೀಟು ಹಂಚಿಕೆ ತಾತ್ಕಾಲಿಕ ಪಟ್ಟಿ ಪ್ರಕಟ

Published 29 ಆಗಸ್ಟ್ 2024, 20:24 IST
Last Updated 29 ಆಗಸ್ಟ್ 2024, 20:24 IST
ಅಕ್ಷರ ಗಾತ್ರ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಎಂಜಿನಿಯರಿಂಗ್‌ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ನೈಜ ಸೀಟು ಹಂಚಿಕೆಯ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಫಲಿತಾಂಶ ಕುರಿತು ಆಕ್ಷೇಪಣೆಗಳಿದ್ದಲ್ಲಿ ಆ.30ರ ಮಧ್ಯಾಹ್ನ 12ರ ಒಳಗೆ ಕೆಇಎ ಇ-ಮೇಲ್‌  keaauthority-ka@nic.in ಗೆ ಕಳುಹಿಸಬಹುದು. ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ನೈಜ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಧಿಕಾರ ಹೇಳಿದೆ.

ಕೆ–ಸೆಟ್‌ ಅರ್ಜಿ ಸಲ್ಲಿಕೆಗೆ ಸೆ.2ರವರೆಗೆ ಅವಕಾಶ:

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ–ಸೆಟ್-24) ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.2 ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಸೆ.3 ಕೊನೆ ದಿನ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT