ಬೆಂಗಳೂರು: ರಾಜ್ಯದಲ್ಲಿನ ಖಾಸಗಿ ವಿಶ್ವವಿದ್ಯಾಲಯಗಳ ಕೋರ್ಸ್ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.

ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಖಾಸಗಿ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳ ಜೊತೆ ಶುಕ್ರವಾರ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹಲವು ಸಿಇಟಿ ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳ ಮೇಲೆ ಹೆಚ್ಚು ಒತ್ತಡ ಬೀಳುತ್ತಿದೆ. ಎಲ್ಲ ಖಾಸಗಿ ವಿಶ್ವವಿದ್ಯಾಲಯಗಳಿಗೂ ಸೇರಿ ಒಂದೇ ಪರೀಕ್ಷೆ ನಡೆಸಿದರೆ ವಿದ್ಯಾರ್ಥಿಗಳಿಗೂ ಅನುಕೂಲವಾಗುತ್ತದೆ ಹಾಗೂ ಸಮಯ ಮತ್ತು ಹಣದ ಉಳಿತಾಯವಾಗುತ್ತದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ಈ ಕುರಿತು ಇನ್ನೊಮ್ಮೆ ಸಭೆ ನಡೆಸಿದ ನಂತರ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಸದ್ಯ, ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಿಗೆ ಕಾಮೆಡ್–ಕೆಯು ಸಿಇಟಿ ನಡೆಸುತ್ತಿದೆ. ಇದರೊಂದಿಗೆ, ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ವೃತ್ತಿಪರ ಕಾಲೇಜುಗಳ ಸಂಸ್ಥೆ (ಕೆಆರ್ಎಲ್ಎಂಪಿಸಿಎ) ಹಾಗೂ ಅಲ್ಪಸಂಖ್ಯಾತ ವೃತ್ತಿಪರ ಕಾಲೇಜುಗಳ ಸಂಸ್ಥೆ (ಎಎಂಪಿಸಿಕೆ) ಯು ಪ್ರತ್ಯೇಕ ಸಿಇಟಿ ನಡೆಸುತ್ತಿದೆ. ಅಲ್ಲದೆ, ಖಾಸಗಿ ಕೋಟಾದ ಸೀಟುಗಳಿಗಾಗಿ ಖಾಸಗಿ ವಿಶ್ವವಿದ್ಯಾಲಯಗಳೂ ಪ್ರವೇಶ ಪರೀಕ್ಷೆ ನಡೆಸುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.