ಬೆಂಗಳೂರು: ‘ಮಂಗನ ಕಾಯಿಲೆಗೆ (ಕ್ಯಾಸನೂರ್ ಫಾರೆಸ್ಟ್ ಡಿಸೀಸ್– ಕೆಎಫ್ಡಿ) ಹೈದರಾಬಾದ್ ಮೂಲದ ಕಂಪನಿ ಲಸಿಕೆ ತಯಾರಿಸಿದೆ. ಈ ವರ್ಷದ ಅಂತ್ಯಕ್ಕೆ ಲಸಿಕೆ ಬಳಕೆಗೆ ಲಭ್ಯವಾಗುವ ನಿರೀಕ್ಷೆಯಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಆರೋಗ್ಯ ಇಲಾಖೆಯ ಸಮಸ್ಯೆಗಳ ಕುರಿತು ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ ಈ ವಿಷಯ ತಿಳಿಸಿದ ಸಚಿವರು, ‘ರಾಜ್ಯದಲ್ಲಿ ಮಂಗನ ಕಾಯಿಲೆಯಿಂದ ಈ ವರ್ಷ ಒಬ್ಬರು ಮೃತಪಟ್ಟಿದ್ದಾರೆ’ ಎಂದರು.

‘ಕೆಎಫ್ಡಿ ಚಿಕಿತ್ಸೆಗೆ ಸದ್ಯ ಲಭ್ಯ ಇರುವ ಲಸಿಕೆ ಕೆಲಸ ಮಾಡುತ್ತಿಲ್ಲ. ಹೊಸ ಲಸಿಕೆ ತಯಾರಿಸುವ ಕುರಿತು ಕೇಂದ್ರ ಸರ್ಕಾರದ ಜೊತೆ ಮಾತನಾಡಿದ್ದೇನೆ. ದೆಹಲಿಯಲ್ಲಿ ಐಸಿಎಂಆರ್ ಮುಖ್ಯಸ್ಥರನ್ನು ಖುದ್ದು ಭೇಟಿಯಾಗಿ ಚರ್ಚೆ ಮಾಡಿದ್ದೇನೆ. ಹೈದರಾಬಾದ್ ಮೂಲದ ಕಂಪನಿ ತಯಾರಿಸಿದ ಲಸಿಕೆಯ ಕ್ಲಿನಿಕಲ್ ಟ್ರಯಲ್ ನಡೆಯುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.