ಬೆಂಗಳೂರು: ನಗರದಲ್ಲಿ ನಡೆದಿದ್ದ ಗಲಭೆ ಪ್ರಕರಣ ಸಂಬಂಧ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ), ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಮುಖಂಡರು ಸೇರಿದಂತೆ 17 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ.

ದೇವರಜೀವನಹಳ್ಳಿ (ಡಿ.ಜೆ.ಹಳ್ಳಿ) ಹಾಗೂ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಠಾಣೆ ವ್ಯಾಪ್ತಿಯಲ್ಲಿ ಆಗಸ್ಟ್ 11ರಂದು ರಾತ್ರಿ ದುಷ್ಕರ್ಮಿಗಳ ತಂಡ ಗಲಭೆ ಸೃಷ್ಟಿಸಿತ್ತು. ಠಾಣೆಗೆ ಹಾಗೂ 60ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿತ್ತು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೂ ನುಗ್ಗಿ ಬೆಂಕಿ ಹಚ್ಚಲಾಗಿತ್ತು.

ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎನ್‌ಐಎ ಅಧಿಕಾರಿಗಳು. ‘ಎಸ್‌ಡಿಪಿಐ, ಪಿಎಫ್‌ಐ ಸಂಘಟನೆ ಮುಖಂಡರೇ ಗಲಭೆಗೆ ಪ್ರಚೋದನೆ ನೀಡಿದ್ದರು. ಪೂರ್ವಭಾವಿ ಸಭೆ ನಡೆಸಿ ಗಲಭೆಗೆ ಸಂಚು ನಡೆಸಿದ್ದರು’ ಎಂಬ ಸಂಗತಿಯನ್ನು ಬಯಲು ಮಾಡಿದ್ದಾರೆ. ಪೂರಕ ಪುರಾವೆಗಳನ್ನು ಸಂಗ್ರಹಿಸಿ, ಮುಖಂಡರು ಸೇರಿ 17 ಮಂದಿಯನ್ನು ಸೆರೆಹಿಡಿದಿದ್ದಾರೆ.

‘ಎಸ್‌ಡಿಪಿಐ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಮೊಹಮ್ಮದ್ ಷರೀಫ್, ಕೆ.ಜಿ.ಹಳ್ಳಿ ವಾರ್ಡ್ ಅಧ್ಯಕ್ಷ ಇಮ್ರಾನ್ ಅಹ್ಮದ್, ಮುಖಂಡರಾದ ರೂಬಾನ್ ವಗಾಸ್, ಶಬ್ಬರ್ ಖಾನ್ ಹಾಗೂಶೆಖ್ ಅಜ್ಮಲ್ ಪ್ರಮುಖ ಆರೋಪಿಗಳು ಎಂದು ಎನ್‌ಐಎ ಮೂಲಗಳು ತಿಳಿಸಿವೆ.

‘ಇವರೆಲ್ಲ ಸೇರಿಕೊಂಡು ಆಗಸ್ಟ್ 11ರಂದು ಸಂಜೆ ಥಣಿಸಂದ್ರ ಹಾಗೂ ಕೆ.ಜಿ.ಹಳ್ಳಿ ವಾರ್ಡ್‌ನಲ್ಲಿ ಸಭೆ ಮಾಡಿದ್ದರು. ಅಲ್ಲಿಯೇ ಗಲಭೆ ಬಗ್ಗೆ ಸಂಚು ರೂಪಿಸಿದ್ದರು’ ಎಂದು ಎನ್‌ಐಎ ಮೂಲಗಳು ಹೇಳಿವೆ.

‘ಸಭೆ ಮುಗಿಸಿದ್ದ ಎಲ್ಲರೂ ಅಖಂಡ ಶ್ರೀನಿವಾಸ್‌ಮೂರ್ತಿ ಮನೆ, ಕೆ.ಜಿ.ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಠಾಣೆಗೆ ಹೋಗಿ ಗಲಭೆ ಸೃಷ್ಟಿಸಿದ್ದರು. ಠಾಣೆಗೆ ಹಾಗೂ ವಾಹನಕ್ಕೆ ಬೆಂಕಿ ಹಚ್ಚಿದ್ದರು. ಎಸ್‌ಡಿಪಿಐ ನಾಗವಾರ ವಾರ್ಡ್ ಘಟಕದ ಅಧ್ಯಕ್ಷ ಅಬ್ಬಾಸ್ ಎಂಬಾತ, ತನ್ನ ಸಹಚರರಾದ ಅಜಿಲ್ ಪಾಷಾ ಹಾಗೂ ಇರ್ಫಾನ್ ಖಾನ್, ಅಕ್ಬರ್ ಖಾನ್ ಜೊತೆ ಠಾಣೆ ಎದುರೇ ನಿಂತು ಗಲಾಟೆ ಮಾಡಲು ಪ್ರಚೋದನೆ ನೀಡಿದ್ದ’ ಎಂದು ಮೂಲಗಳು ತಿಳಿಸಿವೆ.

‘ಆರೋಪಿಗಳಾದ ಸದ್ದಾಂ, ಸೈಯದ್ ಸುಹೇಲ್, ಖಲೀಂಮುಲ್ಲಾ, ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ಪ್ರಚೋದಿಸಿದ್ದರು. ಪ್ರಚೋದನಾಕಾರಿ ಪೋಸ್ಟ್ ಹಾಗೂ ಬರಹಗಳನ್ನು ಆರೋಪಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ನಾನಾ ಗುಂಪು ಹಾಗೂ ಪುಟಗಳಿಗೂ ಪೋಸ್ಟ್‌ಗಳನ್ನು ಹಂಚಿಕೆ ಮಾಡಿದ್ದರು. ಅದುವೇ ಜನರು ಸೇರಲು ಕಾರಣವಾಯಿತು’ ಎಂದೂ ಎನ್‌ಐಎ ಮೂಲಗಳು ಹೇಳಿವೆ.

‘ಈ ಪ್ರಕರಣದಲ್ಲಿ ಹೊಸದಾಗಿ 17 ಮಂದಿ ಬಂಧಿಸುವ ಮೂಲಕ, ಬಂಧಿತರ ಸಂಖ್ಯೆ 187 ಆಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ’ ಎಂದೂ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.