ಕೆಜಿಎಫ್: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ನಸೀರ್ ಅಹಮದ್ ಅವರ ಮೇಲೆ ಸುಳ್ಳು ಆರೋಪ ಹೊರೆಸಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಸಂಚು ರೂಪಿಸಿದ್ದಾರೆ. ಹಾಗಾಗಿ ಪಕ್ಷ ರಾಜೀನಾಮೆಗೆ ಒತ್ತಾಯಿಸಬಾರದೆಂದು ಆಗ್ರಹಿಸಿ ನಸೀರ್ ಅಹಮದ್ ಅಭಿಮಾನಿಗಳು ಭಾನುವಾರ ರಾತ್ರಿ ರಾಬರ್ಟಸನ್ಪೇಟೆಯಲ್ಲಿ ದಿಢೀರನೆ ಪ್ರತಿಭಟನೆ ನಡೆಸಿದರು.

ಕೆಜಿಎಫ್ನಿಂದ ರಾಜಕೀಯ ಜೀವನ ಶುರು ಮಾಡಿದ ಅವರು, ವಿದ್ಯಾರ್ಥಿ ದಿಸೆಯಿಂದಲೂ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿದ್ದವರು. ನಗರದ ಅಭಿವೃದ್ಧಿಗೆ ನಾನಾ ರೀತಿಯಲ್ಲಿ ಸಹಾಯ ಮಾಡಿದ್ದಾರೆ. ಇಂದಿಗೂ ತಾಲ್ಲೂಕಿನ ಯಾವುದೇ ಕಾಂಗ್ರೆಸ್ ಕಾರ್ಯಕರ್ತರಿಗೆ ತೊಂದರೆಯಾದರೆ ಅವರ ನೆರವಿಗೆ ಬರುವುದೇ ನಜೀರ್ ಅಹಮದ್. ದಾವಣಗೆರೆ ಚುನಾವಣೆಯಲ್ಲಿ ರಾಜಕೀಯ ಕುತಂತ್ರ ಮಾಡಿ, ಅವರ ಹೆಸರಿಗೆ ತೇಜೋವಧೆ ಮಾಡಲು ಕೆಲ ದುಷ್ಟ ಶಕ್ತಿಗಳು ಪ್ರಯತ್ನ ಮಾಡುತ್ತಿವೆ. ಮುಖ್ಯಮಂತ್ರಿಗಳು ಇಲ್ಲವೆ ಕಾಂಗ್ರೆಸ್ ಪಕ್ಷ ಯಾವುದೇ ಕಾರಣದಿಂದಲೂ ಅವರ ರಾಜೀನಾಮೆ ಕೇಳಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಶ್ರೀನಿವಾಸ್, ನಗರಸಭೆ ಮಾಜಿ ಸದಸ್ಯರಾದ ಜಯಪಾಲ್, ಅಮೀರ್, ಕೆ.ಸಿ.ಮುರಳಿ, ಮಾಣಿಕ್ಯಂ, ಕಬೀರ್, ಮೋಹನರಾಜ್, ಜಫ್ರುಲ್ಲಾ , ಶಾಹಿದ್, ಮನ್ಸೂರ್, ಸೂಸೈ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-18-1154316800

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.