ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಹಂಚಿಕೆ ಕುರಿತ ಗೊಂದಲದ ಮಧ್ಯೆಯೇ, ಸಚಿವ ಕೆ.ಎಚ್. ಮುನಿಯಪ್ಪ ಅವರ ನಿವಾಸಕ್ಕೆ ತೆರಳಿ ಸಚಿವ ಜಿ. ಪರಮೇಶ್ವರ ಚರ್ಚೆ ನಡೆಸಿದ್ದಾರೆ.

ಮುನಿಯಪ್ಪ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಲು ಸೋಮವಾರ ಅವರ ಮನೆಗೆ ಪರಮೇಶ್ವರ ತೆರಳಿದ್ದರು.

ಹಳೆ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಲಭ್ಯವಿರುವ ಶೇ 15 ಮೀಸಲಾತಿಯಲ್ಲಿಯೇ ಒಳ ಮೀಸಲಾತಿ ಕಲ್ಪಿಸಬೇಕೆಂದು ಎಡಗೈ ಸಮುದಾಯ ಪಟ್ಟು ಹಿಡಿದರೆ, ಗೊಂದಲ ಮುಗಿಯುವರೆಗೆ ಒಳಮೀಸಲಾತಿ ಹಂಚಿಕೆ ಮಾಡಬಾರದೆಂದು ಬಲಗೈ ಸಮುದಾಯದ ನಾಯಕರು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಈ ವಿಷಯ ಕುರಿತು ಚರ್ಚಿಸಲು ಇತ್ತೀಚೆಗೆ ನಡೆದಿದ್ದ ಸಚಿವ ಸಂಪುಟ ಸಭೆಯೂ ಅಪೂರ್ಣವಾಗಿತ್ತು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಮುನಿಯಪ್ಪ ಮತ್ತು ಪರಮೇಶ್ವರ, ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸುವ ಅನಿವಾರ್ಯದ ಬಗ್ಗೆ ಚರ್ಚೆ ನಡೆಸಿದರು ಎಂದು ಗೊತ್ತಾಗಿದೆ.

ಭೇಟಿಯ ಬಳಿಕ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ, ‘ಮುನಿಯಪ್ಪ ಅವರ ಜೊತೆ ಕೆಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದೇನೆ. ಶೇ 56ರಷ್ಟು ಮೀಸಲಾತಿ ನೀಡುವ ಕುರಿತು ಚರ್ಚೆಗಳಾಗಿದ್ದರೂ, ಕೋರ್ಟ್ ಸೂಚನೆಯಂತೆ ಶೇ 50 ಮೀಸಲಾತಿ ಮುಂದುವರಿಸಲು ಯಾವುದೇ ಅಭ್ಯಂತರವಿಲ್ಲ. ಹಳೆ ಮೀಸಲಾತಿಯನ್ನು ಜಾರಿಗೊಳಿಸುವಾಗ ಎದುರಾಗಬಹುದಾದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಮುಂದಾಗಿದೆ’ ಎಂದರು.

‘ಅಲ್ಲದೆ, ಈ ಸೂಕ್ಷ್ಮ ವಿಷಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಯಾವುದೇ ರಾಜಕೀಯ ಲಾಭ ಪಡೆಯಲು ಯತ್ನಿಸಬಾರದು’ ಎಂದರು.

‘ಒಳಮೀಸಲಾತಿ ವಿಚಾರದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು’ ಎಂದು ಮುನಿಯಪ್ಪ ಅವರೂ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.