ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಅಕ್ಕಿಯ ಜೊತೆಗೆ ಹೆಚ್ಚುವರಿ ಆಹಾರ ಧಾನ್ಯಗಳನ್ನು ಕರ್ನಾಟಕಕ್ಕೆ ಒದಗಿಸಬೇಕು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮನವಿ ಮಾಡಿದರು.

ಕರ್ನಾಟಕ ಸರ್ಕಾರವು ಈ ಹಿಂದೆ ಅಕ್ಕಿಯ ಜೊತೆಗೆ ಗೋಧಿ, ಸಕ್ಕರೆ ಮತ್ತಿತರ ಸಾಮಗ್ರಿಗಳನ್ನು ವಿತರಿಸುತ್ತಿತ್ತು. ಪ್ರಸ್ತುತ ಪಡಿತರ ಚೀಟಿದಾರರು ಅಕ್ಕಿ, ರಾಗಿ ಮತ್ತು ಜೋಳ ಮಾತ್ರ ಪಡೆಯುತ್ತಿದ್ದಾರೆ. ಇತ್ತೀಚೆಗೆ ಪಿಡಿಎಸ್ ಫಲಾನುಭವಿಗಳ ಸಮೀಕ್ಷೆ ನಡೆಸಲಾಗಿತ್ತು. ಶೇ 92 ಪಡಿತರ ಚೀಟಿದಾರರು ಗೋಧಿ, ಸಕ್ಕರೆ ಮತ್ತು ಇತರ ಆಹಾರ ಧಾನ್ಯಗಳ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಕ್ಕಿಯ ಜೊತೆಗೆ ತೈಲ ಮತ್ತು ಬೇಳೆಯನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಿಸಲು ವ್ಯವಸ್ಥೆ ಮಾಡಬೇಕಿದೆ. ಇದಕ್ಕ ಕೇಂದ್ರದ ನೆರವು ಬೇಕು’ ಎಂದು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.