ನವದೆಹಲಿ: ಕರ್ನಾಟಕದಲ್ಲಿ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನ ನಡೆಸಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಭಿಲಾಷೆ ವ್ಯಕ್ತಪಡಿಸಿದರು.
ಈ ಸಂಬಂಧ ಲೋಕಸಭಾಧ್ಯಕ್ಷ ಓಂಬಿರ್ಲಾ ಅವರನ್ನು ನವದೆಹಲಿಯಲ್ಲಿ ಸೋಮವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. 22 ವರ್ಷಗಳ ಹಿಂದೆ ಕರ್ನಾಟಕದಲ್ಲಿ ಪೀಠಾಸೀನಾಧಿಕಾರಿಗಳ ಸಮ್ಮೇಳನ ನಡೆದಿತ್ತು.
ಇದೇ 23 ಹಾಗೂ 24ರಂದು ನೂತನ ಸಂಸತ್ ಭವನದಲ್ಲಿ ನಡೆಯಲಿರುವ ಪೀಠಾಸೀನಾಧಿಕಾರಿಗಳ ಸಮ್ಮೇಳನ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸುವುದಾಗಿ ಓಂಬಿರ್ಲಾ ಭರವಸೆ ನೀಡಿದರು.