ಸದ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ. ಯಾರನ್ನು ಎಲ್ಲಿ ಕೂರಿಸಬೇಕು ಎಂಬುದು ಹೈಕಮಾಂಡ್‌ಗೆ ಗೊತ್ತಿದೆ. ಹೈಕಮಾಂಡ್ ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸುತ್ತೇವೆ. ಸತೀಶ ಜಾರಕಿಹೊಳಿ ಆತ್ಮೀಯರು. ಕಾರ್ಯಾಧ್ಯಕ್ಷರಾಗಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ಮುಂದೆಯೂ ಸಂಘಟನೆಗಾಗಿ ಕೆಲಸ ಮಾಡುತ್ತೇವೆ. ನಮ್ಮಲ್ಲಿ ಯಾವುದೇ ಪೈಪೋಟಿ ಇಲ್ಲ. ಯಾರೇ ಕೆಪಿಸಿಸಿ ಅಧ್ಯಕ್ಷ ರಾದರೂ ಖುಷಿ ಇದೆ. ಊಹಾಪೋಹದ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಿಲ್ಲ.