ಬೆಂಗಳೂರು: ನಗರದಲ್ಲಿ ಇಂದಿನಿಂದ ಆರಂಭವಾಗಲಿರುವ 'ಇನ್ವೆಸ್ಟ್ ಕರ್ನಾಟಕ 2025' ಹೂಡಿಕೆ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪಾಲ್ಗೊಳ್ಳುವ ಸಾಧ್ಯತೆ ಕಡಿಮೆಯಾಗಿದೆ ಎಂದು ವರದಿಯಾಗಿದೆ.

ರಾಜ್ಯ ಸರ್ಕಾರವು ಆಯೋಜಿಸುತ್ತಿರುವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು ಮತ್ತು ಬಿಜೆಪಿ ನಾಯಕರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿರುವುದು ಕಾಂಗ್ರೆಸ್ ನಾಯಕತ್ವದ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲೂ ಕೇಂದ್ರ ಸಚಿವರ ಕೆಳಗಡೆ ಖರ್ಗೆ ಹಾಗೂ ರಾಹುಲ್ ಹೆಸರನ್ನು ನಮೂದಿಸಿರುವುದು ಕಾಂಗ್ರೆಸ್ ನಾಯಕತ್ವವನ್ನು ಕೆರಳಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ರಾಜ್ಯದ ನಾಯಕರಿಗೂ ಅತೃಪ್ತಿಯನ್ನು ತಿಳಿಸಲಾಗಿದೆ ಎಂದು ಹೇಳಲಾಗಿದೆ.

ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿ ಕೇಂದ್ರವನ್ನಾಗಿ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ನೆರವಾಗುವ, ನಾವೀನ್ಯ, ಕೈಗಾರಿಕಾ ಪ್ರಗತಿ ಮತ್ತು ಜಾಗತಿಕ ಪಾಲುದಾರಿಕೆಗೆ ರಾಜ್ಯದಲ್ಲಿನ ಸೌಲಭ್ಯಗಳನ್ನು ಇಡೀ ವಿಶ್ವಕ್ಕೆ ಪರಿಚಯಿಸುವ ಆಶಯದ 'ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ (ಇನ್ವೆಸ್ಟ್ ಕರ್ನಾಟಕ–2025)' ಇಂದಿನಿಂದ ಆರಂಭವಾಗಲಿದೆ.

ಇನ್ವೆಸ್ಟ್ ಕರ್ನಾಟಕ ಹೂಡಿಕೆ ಸಮಾವೇಶವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಉದ್ಘಾಟಿಸಲಿದ್ದಾರೆ. ಇಂದು (ಮಂಗಳವಾರ) ಸಂಜೆ 4ಕ್ಕೆ ಸಮಾವೇಶ ಆರಂಭವಾಗಲಿದೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತರಿರಲಿದ್ದಾರೆ.

ಪ್ರಲ್ಹಾದ ಜೋಶಿ, ಎಚ್.ಡಿ. ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್, ಅಶ್ವಿನಿ ವೈಷ್ಣವ್, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಸೇರಿ ಹಲವಾರು ಕೇಂದ್ರ ಸಚಿವರು ಭಾಗಿಯಾಗುವ ನಿರೀಕ್ಷೆಯಿದೆ.

19 ದೇಶಗಳ ಹೆಸರಾಂತ ಉದ್ಯಮಿಗಳು, ಅವರ ಪ್ರತಿನಿಧಿಗಳು ಭಾಗವಹಿಸುವ ಮೂಲಕ ₹10 ಲಕ್ಷ ಕೋಟಿ ಬಂಡವಾಳ ಹೂಡಿಕೆಯ ನಿರೀಕ್ಷೆ ಮೂಡಿಸಿದೆ. ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆ ಸಮಾವೇಶ ವೇದಿಕೆ ಒದಗಿಸಲಿದೆ.
.ಇಂದಿನಿಂದ ಹೂಡಿಕೆ ಸಮಾವೇಶ: ₹10 ಲಕ್ಷ ಕೋಟಿ ಹೂಡಿಕೆ ನಿರೀಕ್ಷೆ .Invest Karnataka | ‘ಇನ್ವೆಸ್ಟ್ ಕರ್ನಾಟಕ’ಕ್ಕೆ ಕೇಂದ್ರ ಸಚಿವರ ದಂಡು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.