ಬೆಂಗಳೂರು: ಭೂಸ್ವಾಧೀನಕ್ಕೆ ಒಳಪಟ್ಟ ಜಮೀನಿಗೆ ಸಂಬಂಧಿಸಿದ ವ್ಯಾಜ್ಯವೊಂದರಲ್ಲಿ ವಾದಿಗಳ ಪರವಾಗಿ ಆದೇಶ ನೀಡಲು ₹15 ಲಕ್ಷ ಲಂಚ ಪಡೆಯುತ್ತಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ವಿಶೇಷ ಉಪವಿಭಾಗಾಧಿಕಾರಿ (ಉತ್ತರ) ನಾಗಪ್ರಶಾಂತ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ನಗರದ ಯಲಹಂಕ ಸಮೀಪದ ಅಟ್ಟೂರು ನಿವಾಸಿ ರವಿಕುಮಾರ್. ಎಲ್ ಎಂಬುವವರ ಜಮೀನಿನ ಸ್ವಾಧೀನಕ್ಕೆ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಅಧಿಸೂಚನೆ ಹೊರಡಿಸಿತ್ತು. ಆ ಜಮೀನಿನ ಒಡೆತನಕ್ಕೆ ಸಂಬಂಧಿಸಿದಂತೆ ಮಂಡಳಿಯಲ್ಲಿ ತಕರಾರು ಅರ್ಜಿ ಸಲ್ಲಿಕೆಯಾಗಿತ್ತು. ಆ ಪ್ರಕರಣದಲ್ಲಿ ರವಿಕುಮಾರ್ ಪರವಾಗಿ ಆದೇಶ ನೀಡಲು ನಾಗಪ್ರಶಾಂತ್ ಅವರು ₹30 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ರವಿಕುಮಾರ್ ಅವರು ಈ ಮೊದಲೇ ₹15 ಲಕ್ಷವನ್ನು ನಾಗಪ್ರಶಾಂತ್ ಅವರ ಚಾಲಕ (ಹೊರಗುತ್ತಿಗೆ) ಕುಮಾರ್ ಅವರಿಗೆ ನೀಡಿದ್ದರು. ಜತೆಗೆ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಅಧಿಕಾರಿಗಳು ಕಾರ್ಯಾಚರಣೆ ರೂಪಿಸಲಾಗಿತ್ತು.

ಅದರಂತೆ ರವಿ ಅವರು, ನಾಗಪ್ರಶಾಂತ್ ಅವರ ಚಾಲಕ ಕುಮಾರ್ ಅವರಿಗೆ ಬುಧವಾರ ಮತ್ತೆ ₹15 ಲಕ್ಷ ನೀಡಿದ್ದರು. ಇದೇ ವೇಳೆ ದಾಳಿ ನಡೆಸಿ, ಇಬ್ಬರನ್ನೂ ಬಂಧಿಸಲಾಯಿತು. ಆರೋಪಿಗಳು ಒಟ್ಟು ₹30 ಲಕ್ಷ ಪಡೆದಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಹಣವನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.