ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಪಹರಣ ಆರೋಪ: ಜಾಮೀನಿಗಾಗಿ ಹೈಕೋರ್ಟ್‌ಗೆ ಭವಾನಿ ರೇವಣ್ಣ ಅರ್ಜಿ

Published 3 ಜೂನ್ 2024, 16:15 IST
Last Updated 3 ಜೂನ್ 2024, 16:15 IST
ಅಕ್ಷರ ಗಾತ್ರ

ಬೆಂಗಳೂರು: ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿನ ಸಂತ್ರಸ್ತೆಯೊಬ್ಬರ ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ, ಪ್ರಜ್ವಲ್ ತಾಯಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಈ ಕುರಿತ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಸೆಷನ್ಸ್‌ ನ್ಯಾಯಾಲಯ ತಿರಸ್ಕರಿಸಿರುವ ಕಾರಣ ಭವಾನಿ ಈಗ ಹೈಕೋರ್ಟ್‌ ಮೊರೆ ಹೊಕ್ಕಿದ್ದಾರೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

ಪ್ರಕರಣವೇನು?: ‘ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್‌.ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 364ಎ, 365 ಮತ್ತು 34 ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ. ಇದರಲ್ಲಿ ಭವಾನಿಯವರ ಪತಿ ಎಚ್‌.ಡಿ.ರೇವಣ್ಣ ಮೊದಲ ಆರೋಪಿಯಾಗಿದ್ದರೆ ಸತೀಶ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ಭವಾನಿ ಅವರು ಜಾಮೀನು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT