ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಹರಣ: ಪುರಾವೆ ಇಲ್ಲದೇ ಸುಳ್ಳು ಪ್ರಕರಣ, ರಾಜಕೀಯ ಷಡ್ಯಂತ್ರ- ಎಚ್‌.ಡಿ.ರೇವಣ್ಣ

Published 5 ಮೇ 2024, 13:07 IST
Last Updated 5 ಮೇ 2024, 13:07 IST
ಅಕ್ಷರ ಗಾತ್ರ

ಬೆಂಗಳೂರು: ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧಿಸಲಾಗಿರುವ ಎಚ್‌.ಡಿ.ರೇವಣ್ಣ ಅವರನ್ನು ನ್ಯಾಯಾಧೀಶರ ಮನೆಗೆ ಹಾಜರುಪಡಿಸಲು ಎಸ್‌ಐಟಿ ಅಧಿಕಾರಿಗಳು ಹೊರಟಿದ್ದು, ಇದಕ್ಕೂ ಮುನ್ನ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆತಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

ಅರಮನೆ ರಸ್ತೆಯಲ್ಲಿರುವ ಎಸ್‌ಐಟಿ ಕಚೇರಿಯಿಂದ ರೇವಣ್ಣ ಅವರನ್ನು ಬೌರಿಂಗ್ ಆಸ್ಪತ್ರೆಗೆ ಪೊಲೀಸ್ ವಾಹನದಲ್ಲಿ ಕರೆತರಲಾಯಿತು. ವಾಹನದಿಂದ ಇಳಿದು ಆಸ್ಪತ್ರೆಗೆ ಹೊರಟಿದ್ದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ರೇವಣ್ಣ, ‘ಯಾವುದೇ ಪುರಾವೆ ಇಲ್ಲದೇ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ಇದು ಸುಳ್ಳು ಪ್ರಕರಣ. ರಾಜಕೀಯ ಷಡ್ಯಂತ್ರ ಇದರ ಹಿಂದಿದೆ’ ಎಂದರು.

ವೈದ್ಯಕೀಯ ಪರೀಕ್ಷೆ ಬಳಿಕ ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಎಸ್‌ಐಟಿ ಅಧಿಕಾರಿಗಳು ಕರೆದೊಯ್ಯಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT