ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರೂಣ ಹತ್ಯೆ ತಡೆಗೆ ಕ್ರಮಗಳ ಕುರಿತು ವರದಿ ಕೇಳಿದ ಮಕ್ಕಳ ಹಕ್ಕುಗಳ ಆಯೋಗ

Published 29 ನವೆಂಬರ್ 2023, 16:56 IST
Last Updated 29 ನವೆಂಬರ್ 2023, 16:56 IST
ಅಕ್ಷರ ಗಾತ್ರ

ಬೆಂಗಳೂರು: ಭ್ರೂಣ ಹತ್ಯೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳು ಕುರಿತು ತಕ್ಷಣವೇ ವರದಿಯನ್ನು ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅವರು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭ್ರೂಣ ಹತ್ಯೆ ಜಾಲ ಪತ್ತೆ ಆಗಿರುವುದು ಮಾಧ್ಯಮಗಳ ಮೂಲಕ ಆಯೋಗದ ಗಮನಕ್ಕೆ ಬಂದಿದೆ. ಜೀವ ಉಳಿಸಬೇಕಾದ ವೈದ್ಯರೇ ಅಮಾನವೀಯ ಕೃತ್ಯದಲ್ಲಿ ಭಾಗಿಯಾಗಿರುವುದಕ್ಕೆ ಇಡೀ ಮನುಕುಲವೇ ತಲೆ ತಗ್ಗಿಸುವಂತಾಗಿದೆ. ಇದರಿಂದ ರಾಜ್ಯವೇ ಆತಂಕಕ್ಕೆ ಒಳಗಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಭ್ರೂಣ ಹತ್ಯೆಗಳ ಪ್ರಕರಣಗಳನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದಲ್ಲಿ ಕಾನೂನು ರೀತಿಯಲ್ಲಿ ಕೈಗೊಂಡ ಕ್ರಮಗಳ ವರದಿಯನ್ನು ಸಲ್ಲಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಲಾಖೆಯಿಂದ ಸೂಕ್ತ ಮಾರ್ಗಸೂಚಿ ಮತ್ತು ಸುತ್ತೋಲೆ ಹೊರಡಿಸಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿಯು ನಿಯಮಿತವಾಗಿ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್‌ ಕೇಂದ್ರಗಳಿಗೆ ಭೇಟಿ ನೀಡುವುದರ ಜತೆಗೆ ಸಭೆ ನಡೆಸುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT