ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆರಗ ವಿರುದ್ಧ ತನಿಖೆಗೆ ಎಸ್‌ಐಟಿ: ಕಿಮ್ಮನೆ ಒತ್ತಾಯ

Published : 20 ಸೆಪ್ಟೆಂಬರ್ 2024, 16:10 IST
Last Updated : 20 ಸೆಪ್ಟೆಂಬರ್ 2024, 16:10 IST
ಫಾಲೋ ಮಾಡಿ
Comments

ಬೆಂಗಳೂರು: ಪಿಎಸ್‌ಐ ಹಗರಣ ಸೇರಿದಂತೆ ಆರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದ ಅವಧಿಯಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಪಿಎಸ್‌ಐ ಹಗರಣದ ತನಿಖೆ ವೇಳೆ ಜ್ಞಾನೇಂದ್ರ ಅವರನ್ನು ವಿಚಾರಣೆಗೆ ಒಳಪಡಿಸಿಲ್ಲ. ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರು ತೀರ್ಥಹಳ್ಳಿಗೆ ಬಂದು ಹೋಗಿದ್ದಾರೆ ಎನ್ನುವ ಮಾಹಿತಿ ಇದೆ. ಈ ಎಲ್ಲ ಅಂಶಗಳ ಕುರಿತು ಸೂಕ್ತ ತನಿಖೆ ನಡೆಸುವಂತೆ ಮುಖ್ಯಮಂತ್ರಿ, ಗೃಹ ಸಚಿವರನ್ನು ಭೇಟಿಯಾಗಿ ಮನವಿ ಮಾಡಲಾಗುವುದು ಎಂದರು. 

ಬಿಟ್‌ಕಾಯಿನ್‌ ಹಗರಣದಲ್ಲಿ ಜ್ಞಾನೇಂದ್ರ ಅವರ ಸ್ನೇಹಿತರು ಭಾಗಿಯಾಗಿದ್ದರು ಎಂಬ ಮಾಹಿತಿ ಇದ್ದರೂ, ಅವರನ್ನು ತನಿಖೆಗೆ ಒಳಪಡಿಸಿಲ್ಲ. ಇದೇ ಪ್ರಕರಣದಲ್ಲಿ ಒಬ್ಬ ಸ್ನೇಹಿತ ಈಗಾಗಲೇ ಜೈಲಿಗೆ ಹೋಗಿ ಹೊರಬಂದಿದ್ದಾರೆ ಎಂದು ಹೇಳಿದರು.

‘ತೀರ್ಥಹಳ್ಳಿ ಸುತ್ತಲಿನ ಸರ್ಕಾರಿ ಹಾಗೂ ಮಠಗಳಿಗೆ ಸೇರಿದ ಜಮೀನುಗಳನ್ನು ಅವರ ಬೆಂಬಲಿಗರು ಖರೀದಿ ಮಾಡಿದ್ದಾರೆ. ಅಷ್ಟೊಂದು ದೊಡ್ಡಮಟ್ಟದಲ್ಲಿ ಭೂಮಿ ಖರೀದಿ ಹೇಗೆ ಸಾಧ್ಯ? ಬೇನಾಮಿ ಹಣ ಎಲ್ಲಿಂದ ಬಂದಿದೆ? ಜ್ಞಾನೇಂದ್ರ ಅವರ ಅವಧಿಯಲ್ಲಿ ಉದ್ಘಾಟಿಸಿದ ಅಷ್ಟೂ ಕಟ್ಟಡಗಳು ಸೋರುತ್ತಿವೆ. ಎಲ್ಲವೂ ಕಳಪೆ’ ಎಂದು ಆರೋಪಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT