ನವದೆಹಲಿ: ಕರ್ನಾಟಕದ ಆಳಂದ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಬಿ.ಆರ್. ಪಾಟೀಲ್ ಅವರಿಗೆ ಮಹಾರಾಷ್ಟ್ರದ ಕಿಸಾನ್ ವಿಜಯೋತ್ಸವ ಸಮಿತಿಯ ‘ಕಿಸಾನ್ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇಲ್ಲಿನ ‘ಕಾನ್ಸ್‌ಟಿಟ್ಯೂಷನ್ ಕ್ಲಬ್’ ಸಭಾಂಗಣದಲ್ಲಿ ಸಮಿತಿಯು ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಬಿ.ಆರ್. ಪಾಟೀಲ ಅವರೊಂದಿಗೆ ರೈತಪರ ಮುಖಂಡರಾದ ರಾಕೇಶ್ ಟಿಕಾಯತ್, ಯೋಗೇಂದ್ರ ಯಾದವ್, ಅಶೋಕ್ ದಾಮ್ಲೆ, ಡಾ.ದರ್ಶನ್ ಪಾಲ್, ಹನನ್ ಮುಲ್ಲಾ, ವಿನಾಯಕರಾವ್ ಮುಲ್ಲಾ ಮತ್ತಿತರರಿಗೆ ನಿವೃತ್ತ ನ್ಯಾಯಮೂರ್ತಿ ಕೊಳಸೆ ಪಾಟೀಲ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ಸತತ ಒಂದು ವರ್ಷದವರೆಗೆ ನಡೆಸಲಾದ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಮುಖಂಡರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಮಿತಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.